ಕಳೆದ 11 ದಿನಗಳಲ್ಲಿ 3ನೇ ಬಾರಿಗೆ ಒಂದು ಕೋಟಿ ಡೋಸ್ ದಾಟಿದ ದೈನಂದಿನ ಕೋವಿಡ್ ಲಸಿಕೆ

ಕಳೆದ 11 ದಿನಗಳಲ್ಲಿ ಮೂರನೇ ಬಾರಿಗೆ ಒಂದು ದಿನದಲ್ಲಿ ಒಂದು ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದ್ದು, ಇದರೊಂದಿಗೆ ದೇಶದಲ್ಲಿ ಇದುವರೆಗೆ 69.68 ಕೋಟಿ ಡೋಸ್‌ ಲಸಿಕೆ ನೀಡಿದಂತಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕಳೆದ 11 ದಿನಗಳಲ್ಲಿ ಮೂರನೇ ಬಾರಿಗೆ ಒಂದು ದಿನದಲ್ಲಿ ಒಂದು ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದ್ದು, ಇದರೊಂದಿಗೆ ದೇಶದಲ್ಲಿ ಇದುವರೆಗೆ 69.68 ಕೋಟಿ ಡೋಸ್‌ ಲಸಿಕೆ ನೀಡಿದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

"ಇಂದು ದೇಶಾದ್ಯಂತ 1 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ. ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಅಭಿಯಾನವು ಬೃಹತ್ ಸಾಧನೆ ಮಾಡಿದೆ" ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಟ್ವೀಟ್ ಮಾಡಿದ್ದಾರೆ.

ಇಂದು ಸಂಜೆ 7 ಗಂಟೆಯವರೆಗೆ ಒಟ್ಟು 1,05,76,911 ಡೋಸ್‌ಗಳನ್ನು ನೀಡಲಾಗಿದ್ದು, ತಡರಾತ್ರಿಯ ವೇಳೆಗೆ ದಿನದ ಅಂತಿಮ ವರದಿಗಳ ಬಂದಾಗ ಈ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಇದುವರೆಗೆ 53,29,27,201 ಫಲಾನುಭವಿಗಳಿಗೆ ಮೊದಲ ಡೋಸ್ ಮತ್ತು 16,39,69,127 ಜನರಿಗೆ ಎರಡನೇ ಡೋಸ್‌ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಒಟ್ಟಾರೆಯಾಗಿ, 18-44 ವಯಸ್ಸಿನ ಗುಂಪಿನಲ್ಲಿ 27,64,10,694 ಜನರು ತಮ್ಮ ಮೊದಲ ಡೋಸ್ ಮತ್ತು 3,57,76,726 ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com