ನೀಟ್- ಯುಜಿ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ

ಸೆಪ್ಟೆಂಬರ್ 12 ರಂದು ನಿಗದಿಯಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್- ಯುಜಿ) ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಪರೀಕ್ಷೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ನ್ಯಾಯಾಲಯ ಬಯಸುವುದಿಲ್ಲ ಮತ್ತು ಅದನ್ನು ಮರು ನಿಗದಿಗೊಳಿಸುವುದು ಸಹ ನ್ಯಾಯಸಮ್ಮತವಲ್ಲ ಎಂದು ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಸೆಪ್ಟೆಂಬರ್ 12 ರಂದು ನಿಗದಿಯಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್- ಯುಜಿ) ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಪರೀಕ್ಷೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ನ್ಯಾಯಾಲಯ ಬಯಸುವುದಿಲ್ಲ ಮತ್ತು ಅದನ್ನು ಮರು ನಿಗದಿಗೊಳಿಸುವುದು ಸಹ ನ್ಯಾಯಸಮ್ಮತವಲ್ಲ ಎಂದು ಹೇಳಿದೆ.

ಸೆಪ್ಟೆಂಬರ್ 12 ರಂದು ಹಲವು ಪರೀಕ್ಷೆಗಳಿದ್ದರೆ ಆದ್ಯತೆ ಮೇರೆಗೆ ವಿದ್ಯಾರ್ಥಿಗಳು ಒಂದನ್ನು ಆಯ್ಕೆ ಮಾಡಿಕೊಳ್ಳಲಿ, ಪರೀಕ್ಷಾ ದಿನಾಂಕಗಳಿಗೆ ಸಂಬಂಧಿಸಿದಂತೆ ಎಲ್ಲರನ್ನೂ ತೃಪ್ತಿಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎ.ಎಂ. ಖಾನ್ ವಿಲ್ಕರ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ. ಆದಾಗ್ಯೂ, ಸಂಬಂಧಪಟ್ಟ ಪ್ರಾಧಿಕಾರದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯವಿದ್ದು, ಕಾನೂನಿನ ಪ್ರಕಾರ ಶೀಘ್ರದಲ್ಲಿಯೇ ಅದು  ಬಗೆಹರಿಯಬಹುದೆಂದು ನ್ಯಾಯಾಲಯ ಹೇಳಿದೆ. 

ಅರ್ಜಿದಾರರ ವಾದವು ಶೇಕಡಾ 99 ರಷ್ಟು ವಿದ್ಯಾರ್ಥಿಗಳಿಗೆ ಅನ್ವಯವಾಗಲ್ಲ, ಕೇವಲ ಶೇ.1 ರಷ್ಟು ವಿದ್ಯಾರ್ಥಿಗಳಿಗಾಗಿ ಪರೀಕ್ಷೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ. ಆದರೆ, ಪರೀಕ್ಷಾ ದಿನಾಂಕಗಳನ್ನು ಬದಲಾಯಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರ ಮನವಿ ಸಲ್ಲಿಸಬಹುದು ಎಂದು ಅರ್ಜಿದಾರರ ಪರ ವಕೀಲರಾದ ಶೋಯೆಲ್ ಅಲಂ ಅವರಿಗೆ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಸಿ.ಟಿ. ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ. 

ಸೆಪ್ಟೆಂಬರ್ 12 ರಂದು ಇನ್ನಿತರ ಅನೇಕ ಪರೀಕ್ಷೆಗಳು ನಡೆಯುತ್ತಿರುವುದರಿಂದ ನೀಟ್- ಯುಜಿ ಪರೀಕ್ಷೆಯನ್ನು ಮುಂದೂಡಬೇಕೆಂದು ಅಲಂ ವಾದಿಸಿದರು. ಹಲವು ಪರೀಕ್ಷೆಗಳಿದ್ದರೆ ಆದ್ಯತೆ ಮೇರೆಗೆ ವಿದ್ಯಾರ್ಥಿಗಳು ಒಂದನ್ನು ಆಯ್ಕೆ ಮಾಡಿಕೊಳ್ಳಲಿ ಎಂದು ನ್ಯಾಯಪೀಠ ಹೇಳಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com