ಮುಜಾಫರ್ ನಗರ ಗಲಭೆ: 8 ವರ್ಷಗಳ ಬಳಿಕ 1117 ಆರೋಪಿಗಳು ಖುಲಾಸೆ, 7 ಮಂದಿಗೆ ಶಿಕ್ಷೆ!

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 2013ರ ಉತ್ತರ ಪ್ರದೇಶದ ಮುಜಾಫರ್‌ ನಗರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 1,117 ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದೆ. 
ಮುಜಾಫರ್ ನಗರ ಗಲಭೆ ವೇಳೆ ಭದ್ರತೆ (ಸಂಗ್ರಹ ಚಿತ್ರ)
ಮುಜಾಫರ್ ನಗರ ಗಲಭೆ ವೇಳೆ ಭದ್ರತೆ (ಸಂಗ್ರಹ ಚಿತ್ರ)

ಲಖನೌ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 2013ರ ಉತ್ತರ ಪ್ರದೇಶದ ಮುಜಾಫರ್‌ ನಗರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 1,117 ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದೆ. 

ಸಾಕ್ಷ್ಯಾಧಾರ ಕೊರತೆಯ ಕಾರಣ ಎಂಟು ವರ್ಷ ಗಳ ಸುಧೀರ್ಘ ವಿಚಾರಣೆ ಬಳಿಕ ಈ 1,117 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ತಿಳಿದುಬಂದಿದೆ. 

2013ರ ಆಗಸ್ಟ್‌ 27ರಂದು ನಡೆದ ಶಹನವಾಜ್‌ ಎಂಬುವವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣ ಜಿಲ್ಲೆಯಲ್ಲಿ ಗಲಭೆ ಸೃಷ್ಟಿಗೆ ಕಾರಣವಾಗಿತ್ತು. ಗಲಭೆ ಪ್ರಕರಣದ ತನಿಖೆ ನಡೆಸಲು ಸರ್ಕಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿತ್ತು. ಎಸ್‌ಐಟಿ ಅಧಿಕಾರಿಗಳ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 1480 ಮಂದಿ ವಿರುದ್ಧ 510 ಪ್ರಕರಣಗಳನ್ನು ದಾಖಲಿಸಲಾಗಿತ್ತು. 175 ಪ್ರಕರಣಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಪೊಲೀಸರು ದರೋಡೆ, ಕೊಲೆ, ಸಾರ್ವಜನಿಕ ಆಸ್ತಿಗೆ ಹಾನಿ ಸೇರಿದಂತೆ 97 ಪ್ರಕರಣಗಳನ್ನು ದಾಖಲಿಸಿದ್ದರು. ಈ ಪೈಕಿ ಜಿಲ್ಲೆಯ ಕಾವಲ್‌ಹಳ್ಳಿಯಲ್ಲಿ ಸಚಿನ್ ಮತ್ತು ಗೌರವ್ ಎಂಬ ಇಬ್ಬರು ಯುವಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಗೆ ಶಿಕ್ಷೆ ವಿಧಿಸಲಾಗಿದೆ.

ಆದರೆ ಗಲಭೆಯಲ್ಲಿ ಪಾಲ್ಗೊಂಡಿದ್ದ 1,117 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯ  ಖುಲಾಸೆಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಎಸ್‌ಐಟಿ ಅಧಿಕಾರಿಗಳ ಪ್ರಕಾರ, ಪೊಲೀಸರು 1,480 ಜನರ ವಿರುದ್ಧ 510 ಪ್ರಕರಣಗಳನ್ನು ದಾಖಲಿಸಿದ್ದು, 175 ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದ್ದಾರೆ.

ಮತ್ತೋರ್ವ ಅಧಿಕಾರಿಯ ಪ್ರಕಾರ 97 ಪ್ರಕರಣಗಳನ್ನು ನ್ಯಾಯಾಲಯವು ತೀರ್ಮಾನಿಸಿದೆ. ಅಂತೆಯೇ ಸಾಕ್ಷಿಗಳ ಕೊರತೆಯಿಂದಾಗಿ 1,117 ಜನರನ್ನು ದೋಷಮುಕ್ತಗೊಳಿಸಿದೆ. ಈ ಯಾವುದೇ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಮೇಲ್ಮನವಿ ಸಲ್ಲಿಸಿಲ್ಲ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com