ಮುಂಬೈ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಫೋನ್ ನಂಬರ್ ಪೋರ್ನ್ ವೆಬ್ ಸೈಟ್ ನಲ್ಲಿ ಹಾಕಿ, ಸೆಕ್ಸ್ ಆಟಿಕೆ ಕಳುಹಿಸಿದ ಭೂಪ!

ತನ್ನ ಪ್ರೀತಿ ತಿರಸ್ಕರಿಸಿದ್ದರಿಂದ ಕೋಪಗೊಂಡ 26 ವರ್ಷದ ವ್ಯಕ್ತಿಯೊಬ್ಬ ಯುವತಿಯ ಫೋನ್ ನಂಬರ್ ಅನ್ನು ಅಶ್ಲೀಲ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿ, ಆಕೆಗೆ ಸೆಕ್ಸ್ ಟಾಯ್...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮುಂಬೈ: ತನ್ನ ಪ್ರೀತಿ ತಿರಸ್ಕರಿಸಿದ್ದರಿಂದ ಕೋಪಗೊಂಡ 26 ವರ್ಷದ ವ್ಯಕ್ತಿಯೊಬ್ಬ ಯುವತಿಯ ಫೋನ್ ನಂಬರ್ ಅನ್ನು ಅಶ್ಲೀಲ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿ, ಆಕೆಗೆ ಸೆಕ್ಸ್ ಟಾಯ್ ಕಳುಹಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.

ಈ ವರ್ಷದ ಆರಂಭದಲ್ಲಿ ತನ್ನ ಪ್ರೀತಿಯನ್ನು ತಿರಸ್ಕರಿಸಿದ ನಂತರ ಯುವತಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಮಲಾಡ್ ಪೊಲೀಸರು ಕಳೆದ ವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಕಾಲೇಜು ವಿದ್ಯಾರ್ಥಿನಿಯಾಗಿದ್ದ ಯುವತಿ, ಕಳೆದ ಫೆಬ್ರವರಿಯಿಂದ ತನಗೆ ಲೈಂಗಿಕ ಒಲವು ಕೋರಿ ಹಲವು ಜನರಿಂದ ಕರೆಗಳು ಬರುತ್ತಿವೆ ಮತ್ತು ಅಪರಿಚಿತ ವ್ಯಕ್ತಿಯೊಬ್ಬರು ತನಗೆ ಸೆಕ್ಸ್ ಟಾಯ್ ಗಳನ್ನು ಕೊರಿಯರ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ತನಿಖೆಯ ಸಮಯದಲ್ಲಿ, ಯುವತಿಯ ಫೋನ್ ನಂಬರ್ ಅನ್ನು ಪೋರ್ನ್ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಲಾಗಿದೆ ಮತ್ತು ಲೈಂಗಿಕ ಆಟಿಕೆಗಳನ್ನು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ಕಳುಹಿಸುತ್ತಿರುವುದನ್ನು ಪೋಲಿಸರು ಪತ್ತೆಹಚ್ಚಿದ್ದಾರೆ.

ಆರೋಪಿಯನ್ನು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com