66 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಖರೀದಿಗೆ ಕೇಂದ್ರ ಸರ್ಕಾರ ಆದೇಶ- ಮೂಲಗಳು
ಡಿಸೆಂಬರ್ ಒಳಗೆ 66 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಪೂರೈಕೆಗಾಗಿ ಸೆರಂ ಇನ್ಸಿಟಿಟ್ಯೂಟ್ ಆಫ್ ಇಂಡಿಯಾಕ್ಕೆ ಕೇಂದ್ರ ಸರ್ಕಾರ ಖರೀದಿ ಆದೇಶ ನೀಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
Published: 09th September 2021 08:40 PM | Last Updated: 09th September 2021 08:42 PM | A+A A-

ಕೋವಿಶೀಲ್ಡ್ ಲಸಿಕೆ ಚಿತ್ರ
ನವದೆಹಲಿ: ಡಿಸೆಂಬರ್ ಒಳಗೆ 66 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಪೂರೈಕೆಗಾಗಿ ಸೆರಂ ಇನ್ಸಿಟಿಟ್ಯೂಟ್ ಆಫ್ ಇಂಡಿಯಾಕ್ಕೆ ಕೇಂದ್ರ ಸರ್ಕಾರ ಖರೀದಿ ಆದೇಶ ನೀಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
ಸೆಪ್ಟೆಂಬರ್ ತಿಂಗಳಲ್ಲಿ 20.29 ಕೋಟಿ ಡೋಸ್ ಕೋವಿಶೀಲ್ಡ್ ಪೂರೈಸಲು ಸಾಧ್ಯವಾಗುತ್ತದೆ ಎಂದು ಎಸ್ ಐಐ, ಸರ್ಕಾರಿ ಮತ್ತು ನಿಯಂತ್ರಕ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಮಾಹಿತಿ ನೀಡಿದ ನಂತರ ಈ ಬೆಳವಣಿಗೆಯಾಗಿದೆ.
ಪುಣೆ ಮೂಲದ ಸಂಸ್ಥೆಯ ಕೋವಿಶೀಲ್ಡ್ ಉತ್ಪಾದನಾ ಸಾಮರ್ಥ್ಯವನ್ನು ತಿಂಗಳಿಗೆ 20 ಕೋಟಿ ಡೋಸ್‌ಗಳಿಗೆ ಹೆಚ್ಚಿಸಿದೆ. ಆರೋಗ್ಯ ಸಚಿವಾಲಯ ಜುಲೈನಲ್ಲಿ 28.50 ಕೋಟಿ ಡೋಸ್ ಕೋವಾಕ್ಸಿನ್ ಪೂರೈಕೆಗಾಗಿ ಭಾರತ್ ಬಯೋಟೆಕ್‌ಗೆ ಆದೇಶ ನೀಡಿತ್ತು. ಆದರೆ, ಅಷ್ಟು ಡೋಸ್ ನ್ನು ಪೂರೈಸಲು ಆ ಸಂಸ್ಥೆಗೆ ಇನ್ನೂ ಸಾಧ್ಯವಾಗಿಲ್ಲ ಎಂದು ಅಧಿಕೃತ ಮೂಲಗಳು ಹೇಳಿವೆ.
ದೇಶದಲ್ಲಿ ನೀಡಲಾದ ಲಸಿಕೆ ಪ್ರಮಾಣ 65 ಕೋಟಿ ದಾಟಿದ್ದರಿಂದ ಆಗಸ್ಟ್ 30 ರಂದು ನೀತಿ ಆಯೋಗ ಸದಸ್ಯ ಡಾ. ವಿ. ಕೆ. ಪೌಲ್ ಮತ್ತು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರಿಗೆ ಪತ್ರ ಬರೆದಿದ್ದ ಪ್ರಕಾಶ್ ಕುಮಾರ್ ಸಿಂಗ್
ಸೆರಂ ಇನ್ಸಿಟಿಟ್ಯೂಟ್ ಆಫ್ ಇಂಡಿಯಾ ಒಂದರಿಂದಲೇ 60 ಕೋಟಿ ಡೋಸ್ ಕೋವಿಶೀಲ್ಡ್ ಪೂರೈಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದರು.
ದೇಶದ ಜನರ ರಕ್ಷಣೆ ಬಗ್ಗೆ ಸೆರಂ ಇನ್ಸಿಟಿಟ್ಯೂಟ್ ಆಫ್ ಇಂಡಿಯಾ ಯಾವಾಗಲೂ ಪ್ರಾಮಾಣಿಕವಾಗಿ ಕಾಳಜಿ ವಹಿಸುತ್ತದೆ. ಸಿಇಒ ಆದರ್ ಸಿ ಪೂನವಲ್ಲಾ ಅವರ ನೇತೃತ್ವದಲ್ಲಿ, ನಮ್ಮ ತಂಡ ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸರ್ಕಾರದೊಂದಿಗೆ ಅವಿರತವಾಗಿ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದರು.