ಮಹಾರಾಷ್ಟ್ರದಲ್ಲಿ ಒಂದೇ ದಿನ ದಾಖಲೆಯ 14 ಲಕ್ಷಕ್ಕೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ

ಮಹಾರಾಷ್ಟ್ರ ಬುಧವಾರ ಕೋವಿಡ್ -19 ಲಸಿಕೆಯನ್ನು 14,39,809 ಜನರಿಗೆ ನೀಡಿದ್ದು, ಇದು ಒಂದೇ ದಿನದಲ್ಲಿ ಹಾಕಿದ ಅತಿ ಹೆಚ್ಚು ಡೋಸ್ ಆಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ಮಹಾರಾಷ್ಟ್ರ ಬುಧವಾರ ಕೋವಿಡ್ -19 ಲಸಿಕೆಯನ್ನು 14,39,809 ಜನರಿಗೆ ನೀಡಿದ್ದು, ಇದು ಒಂದೇ ದಿನದಲ್ಲಿ ಹಾಕಿದ ಅತಿ ಹೆಚ್ಚು ಡೋಸ್ ಆಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಇದುವರೆಗೆ ಒಟ್ಟು 6.55 ಕೋಟಿ ಡೋಸ್‌ ಕೋವಿಡ್ ಲಸಿಕೆ ನೀಡಲಾಗಿದೆ ಮತ್ತು 1,79,78,805 ಜನರಿಗೆ ಸಂಪೂರ್ಣ ಲಸಿಕೆ ನೀಡಲಾಗಿದೆ(ಎರಡೂ ಡೋಸ್‌) ಎಂದು ಸಾರ್ವಜನಿಕ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಪ್ರದೀಪ್ ವ್ಯಾಸ್ ಅವರು ಹೇಳಿದ್ದಾರೆ.

ಸೆಪ್ಟೆಂಬರ್ 4 ರಂದು ರಾಜ್ಯದಲ್ಲಿ 12,27,224 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿತ್ತು. ಇಂದು ಆ ದಾಖಲೆಯನ್ನು ಮುರಿದು ಹೊಸ ದಾಖಲೆ ಮಾಡಲಾಗಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರು ಶೇ. 48.46 ರಷ್ಟು ಮಂದಿ ಕನಿಷ್ಠ ಒಂದು ಡೋಸ್ ಕೋವಿಡ್ -19 ಲಸಿಕೆ ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

18-44 ವಯಸ್ಸಿನ ಗುಂಪಿನಲ್ಲಿ ಶೇ. 37.88 ರಷ್ಟು ಜನರು ಕನಿಷ್ಠ ಒಂದು ಡೋಸ್ ತೆಗೆದುಕೊಂಡಿದ್ದರೆ, 45 ವರ್ಷಕ್ಕಿಂತ ಮೇಲ್ಪಟ್ಟ ಗುಂಪಿನಲ್ಲಿ ಶೇ. 52.24 ರಷ್ಟು ಜನ ಕನಿಷ್ಠ ಒಂದು ಡೋಸ್ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com