ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಜಸ್ಥಾನ: ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಗಳು ಪರಾರಿ

ರಾಜಸ್ಥಾನದ ಅಳ್ವಾರ್ ಜಿಲ್ಲೆಯಲ್ಲಿ 21 ವರ್ಷದ ಮಹಿಳೆ ಮೇಲೆ ಚಲಿಸುತ್ತಿದ್ದ ಕಾರಿನಲ್ಲೇ ಇಬ್ಬರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಜೈಪುರ: ರಾಜಸ್ಥಾನದ ಅಳ್ವಾರ್ ಜಿಲ್ಲೆಯಲ್ಲಿ 21 ವರ್ಷದ ಮಹಿಳೆ ಮೇಲೆ ಚಲಿಸುತ್ತಿದ್ದ ಕಾರಿನಲ್ಲೇ ಇಬ್ಬರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಸದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಈ ಘಟನೆ ನಡೆದಿದೆ.

"ಮಹಿಳೆ ತನ್ನ ಗಂಡನ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಸಿಲಿಸೆರ್ ಪ್ರದೇಶಕ್ಕೆ ಹೋಗುತ್ತಿದ್ದಾಗ ದಾರಿ ಮಧ್ಯೆ ಪೆಟ್ರೋಲ್ ಖಾಲಿಯಾಗಿದೆ.  ಆ ವ್ಯಕ್ತಿ ಮಹಿಳೆಯನ್ನು ಬಿಟ್ಟು ತಾನು ಒಬ್ಬನೇ ಪೆಟ್ರೋಲ್ ಪಂಪ್ ಗೆ ತೆರಳಿದ್ದಾರೆ. ಈ ವೇಳೆ ಮಹಿಳೆ ಅದೇ ರಸ್ತೆಯಲ್ಲಿ ಬಂದ ಕಾರ್ ಗೆ ಲಿಫ್ಟ್ ಕೇಳಿದ್ದಾರೆ. ಆ ಕಾರಿನಲ್ಲಿ ಇಬ್ಬರು ಪುರುಷರ ಇಬ್ಬರು" ಎಂದು ಪೊಲೀಸರು ಹೇಳಿದ್ದಾರೆ.

"ಆರೋಪಿಗಳು ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಲಾಗಿದೆ. ಕಾರಿನಲ್ಲಿ ದೆಹಲಿ ನೋಂದಣಿ ನಂಬರ್ ಪ್ಲೇಟ್ ಇತ್ತು" ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಂತರ ಆರೋಪಿಗಳು ಪರಾರಿಯಾಗಿದ್ದು, ಅವರನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com