ತಮಿಳುನಾಡು ಸೇರಿದಂತೆ ನಾಲ್ಕು ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಿದ ರಾಷ್ಟ್ಪತಿ ಕೋವಿಂದ್!

ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ತಮಿಳುನಾಡು, ಉತ್ತರಾಖಂಡ ಸೇರಿದಂತೆ ನಾಲ್ಕು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ (ಸಂಗ್ರಹ ಚಿತ್ರ)
ರಾಷ್ಟ್ರಪತಿ ರಾಮನಾಥ್ ಕೋವಿಂದ್ (ಸಂಗ್ರಹ ಚಿತ್ರ)

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ತಮಿಳುನಾಡು, ಉತ್ತರಾಖಂಡ ಸೇರಿದಂತೆ ನಾಲ್ಕು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.

ತಮಿಳುನಾಡು, ಉತ್ತರಾಖಂಡ್, ಪಂಜಾಬ್ ಸೇರಿದಂತೆ ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕವಾಗಿದೆ. ಆರ್. ಎನ್. ರವಿ ತಮಿಳುನಾಡು ರಾಜ್ಯಪಾಲರಾಗಿ ನೇಮಕಗೊಂಡಿದ್ದು, ಗುರುವಾರ ರಾತ್ರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ತಮಿಳುನಾಡು,  ಉತ್ತರಾಖಂಡ್, ಪಂಜಾಬ್ ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕವಾಗಿದೆ.

ನೂತನ ಆದೇಶ ಪ್ರಕಾರ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪಂಜಾಬ್ ರಾಜ್ಯದ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಅಸ್ಸಾಂನ ರಾಜ್ಯಪಾಲ ಪ್ರೊ. ಜಗದೀಶ್ ಮುಖಿ ನಾಗಾಲ್ಯಾಂಡ್‌ನ ಉಸ್ತುವಾರಿ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. 

ಉಸ್ತುವಾರಿ ರಾಜ್ಯಪಾಲರ ನೇಮಕ
ಇನ್ನು ನಾಗಾಲ್ಯಾಂಡ್ ರಾಜ್ಯಕ್ಕೆ ಉಸ್ತುವಾರಿ ರಾಜ್ಯಪಾಲರ ನೇಮಕ ಮಾಡಲಾಗಿದ್ದು, ನಾಗಲ್ಯಾಂಡ್ ರಾಜ್ಯದ ಮಾಜಿ ರಾಜ್ಯಪಾಲ ಆರ್. ಎನ್. ರವಿ ತಮಿಳುನಾಡಿನ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪಂಜಾಬ್ ರಾಜ್ಯದ ಉಸ್ತುವಾರಿಯನ್ನು  ನೋಡಿಕೊಳ್ಳುತ್ತಿದ್ದರು. ಗುರುವಾರ ಹೊರಡಿಸುವ ಆದೇಶ ಪ್ರಕಾರ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪಂಜಾಬ್ ರಾಜ್ಯದ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಅಸ್ಸಾಂನ ರಾಜ್ಯಪಾಲ ಪ್ರೊ. ಜಗದೀಶ್ ಮುಖಿ ನಾಗಾಲ್ಯಾಂಡ್‌ನ ಉಸ್ತುವಾರಿ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. 

ಅಂತೆಯೇ ಲೆಫ್ಟಿನೆಂಟ್ ಗವರ್ನರ್ ಗುರ್‌ ಮೀತ್ ಸಿಂಗ್ ಉತ್ತರಾಖಂಡ್‌ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಉತ್ತರಾಖಂಡ್ ರಾಜ್ಯಪಾಲರಾಗಿದ್ದ ಬೇಬಿ ರಾಣಿ ಮೌರ್ಯ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2018ರ ಆಗಸ್ಟ್ 6ರಂದು ಬೇಬಿ ರಾಣಿ ಮೌರ್ಯ ಉತ್ತರಾಖಂಡ್  ರಾಜ್ಯಪಾಲರಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ವೈಯಕ್ತಿಕ ಕಾರಣಗಳಿಂದಾಗಿ ಅವಧಿಗೂ ಮೊದಲೇ ಬೇಬಿ ರಾಣಿ ಮೌರ್ಯ ರಾಜೀನಾಮೆ ನೀಡಿದ್ದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com