ರಾಜಧಾನಿ ದೆಹಲಿಗೆ ವರುಣಾಘಾತ: ಜಲ ದಿಗ್ಬಂಧನ; ವಾಹನ ಸಂಚಾರಕ್ಕೆ ಜನರ ಪರದಾಟ

ರಾಜಧಾನಿ ದೆಹಲಿ ಮತ್ತು ಸುತ್ತಮುತ್ತ ಭಾಗಗಳಲ್ಲಿ ನಸುಕಿನಿಂದಲೇ ಸತತ ಮಳೆಯಾಗುತ್ತಿದ್ದು, ವರುಣನ ಆರ್ಭಟದಿಂದಾಗಿ ರಸ್ತೆಗಳು ಜಲಾವೃತವಾಗಿವೆ, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಜನರ, ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಜಧಾನಿ ದೆಹಲಿ ಮತ್ತು ಸುತ್ತಮುತ್ತ ಭಾಗಗಳಲ್ಲಿ ನಸುಕಿನಿಂದಲೇ ಸತತ ಮಳೆಯಾಗುತ್ತಿದ್ದು, ವರುಣನ ಆರ್ಭಟದಿಂದಾಗಿ ರಸ್ತೆಗಳು ಜಲಾವೃತವಾಗಿವೆ, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಜನರ, ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಮಳೆಗೆ ದೆಹಲಿ ವಿಮಾನ ನಿಲ್ದಾಣದ ಭಾಗಶಃ ನೀರಿನಿಂದ ಮುಳುಗಡೆಯಾಗಿದೆ. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ  ಟರ್ಮಿನಲ್ 3ರಲ್ಲಿ ನೀರು ತುಂಬಿಕೊಂಡು ವಿಮಾನಗಳ ಹಾರಾಟಕ್ಕೆ ಅಡಚಣೆಯುಂಟಾಗಿದೆ. ಅಲ್ಲಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಭಾರೀ ಮಳೆಯಾಗಿದೆ. ಪ್ರಯಾಣಿಕರಿಗೆ ಅಡಚಣೆಯುಂಟಾಗಿದ್ದು ನಾವು ವಿಷಾದಿಸುತ್ತೇವೆ ಎಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ ವರದಿ ಪ್ರಕಾರ ಭಾರೀ ಸತತ ಮಳೆ ದೆಹಲಿಯ ಹಲವು ಭಾಗಗಳಲ್ಲಿ ಬೀಳುವ ಸಾಧ್ಯತೆಯಿದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com