ಲವ್ ಜಿಹಾದ್ ವಿರುದ್ಧ ಸರ್ಕಾರ ಕಠಿಣ ಕ್ರಮ: ಗುಜರಾತ್ ಸಿಎಂ ವಿಜಯ್ ರೂಪಾನಿ

’ಲವ್ ಜಿಹಾದ್‌’ ವಿರುದ್ಧ ಗುಜರಾತ್‌ ಸರ್ಕಾರ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ವಿಜಯ್‌ ರೂಪಾನಿ ತಿಳಿಸಿದ್ದಾರೆ.
ವಿಜಯ್ ರೂಪಾನಿ
ವಿಜಯ್ ರೂಪಾನಿ

ಅಹಮದಾಬಾದ್‌: ’ಲವ್ ಜಿಹಾದ್‌’ ವಿರುದ್ಧ ಗುಜರಾತ್‌ ಸರ್ಕಾರ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ವಿಜಯ್‌ ರೂಪಾನಿ ತಿಳಿಸಿದ್ದಾರೆ. 

ಪಶುಸಂಗೋಪನೆ ವೃತ್ತಿಯಲ್ಲಿ ತೊಡಗಿರುವ ಮಲ್ದಾರಿ ಸಮುದಾಯದವರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು ಗೋಹತ್ಯೆಯಲ್ಲಿ ತೊಡಗಿರುವವರ ವಿರುದ್ಧವು ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದರು.

ಹಿಂದೂ ಸಮುದಾಯದ ಹೆಣ್ಣು ಮಕ್ಕಳನ್ನು ಬಲೆಗೆ ಬೀಳಿಸಿಕೊಳ್ಳುವವರು, ಅವರನ್ನು ಕರೆದುಕೊಂಡು ಹೋಗುವವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ವಿಜಯ್‌ ರೂಪಾನಿ ಹೇಳಿದರು. ಭೂಗಳ್ಳರು, ಸರಗಳ್ಳರ ವಿರುದ್ಧವು ಸರ್ಕಾರ ಕಠಿಣ ಕಾನೂನು ಕ್ರಮಗಳನ್ನು ಕೈಕೊಳ್ಳಲಿದೆ ಎಂದರು. ತಮ್ಮ ಅಧಿಕಾರವಧಿಯಲ್ಲಿ ಹಲವು ಹಸುಗಳನ್ನು ರಕ್ಷಿಸಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ಗೋವುಗಳ ಮೇವಿಗೆ ಸಬ್ಸಿಡಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com