ಮುಂಬೈ: 'ನಿರ್ಭಯಾ' ರೀತಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು!

ಅತ್ಯಾಚಾರ ಹಾಗೂ ಹಲ್ಲೆಗೊಳಗಾಗಿ ಮುಂಬೈನ ರಾಜವಾಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಅತ್ಯಾಚಾರ ಹಾಗೂ ಹಲ್ಲೆಗೊಳಗಾಗಿ ಮುಂಬೈನ ರಾಜವಾಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. 

ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಆಕೆಯ ಗುಪ್ತಾಂಗಕ್ಕೆ ರಾಡ್​ ಹಾಕಿ, ತಲೆಗೆ ರಾಡ್​ನಿಂದ ಹೊಡೆದು ವಿಕೃತಿ ಮೆರೆದಿದ್ದನು. 

ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪೊಲೀಸರು ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಮಹಿಳೆಯನ್ನು ರಾಜವಾಡಿ ಆಸ್ಪತ್ರೆಗೆ ದಾಖಲಿಸಿದ್ದರು.

ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿ ಮೋಹನ್ ಚವ್ಹಾಣ್ (45)ನನ್ನು ಸಾಕಿನಾಕಾ ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರೆಸಿದ್ದಾರೆ. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಂತ್ರಸ್ತ ಮಹಿಳೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com