ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕಾರ

ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ತಿಳಿಸಿದ್ದಾರೆ. 
ರಾಜ್ಯಪಾಲರೊಂದಿಗೆ ಮಾತುಕತೆ ನಡೆಸುತ್ತಿರುವ ಭೂಪೇಂದ್ರ ಪಟೇಲ್ ಮತ್ತು  ವಿಜಯ್ ರೂಪಾನಿ
ರಾಜ್ಯಪಾಲರೊಂದಿಗೆ ಮಾತುಕತೆ ನಡೆಸುತ್ತಿರುವ ಭೂಪೇಂದ್ರ ಪಟೇಲ್ ಮತ್ತು ವಿಜಯ್ ರೂಪಾನಿ

ಗಾಂಧಿನಗರ: ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ತಿಳಿಸಿದ್ದಾರೆ. 

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಮಾತ್ರ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನೂ ಕೆಲವೇ ದಿನಗಳಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಸಮಾಲೋಚಿಸಿದ ಬಳಿಕ ನೂತನ ಸಂಪುಟವನ್ನು ರಚಿಸಲಾಗುವುದು ಎಂದರು. 

ಉಪ ಉಪ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಪಕ್ಷದ ಶಾಸಕಾಂಗ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಭೂಪೇಂದ್ರ ಪಟೇಲ್ , ತನ್ನ ಮೇಲೆ ನಂಬಿಕೆ ಇಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. 

 ಸರ್ಕಾರ ಉತ್ತವಾಗಿ ಕಾರ್ಯನಿರ್ವಹಿಸಿದೆ ಹಾಗಾಗೀ ಅಭಿವೃದ್ಧಿ ಕಾರ್ಯಕ್ರಮಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ತಲುಪಿವೆ. ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದುವರೆಸಲು ನಾವು ಹೊಸದಾಗಿ ಯೋಜನೆ ರೂಪಿಸುತ್ತೇವೆ ಮತ್ತು ಪಕ್ಷದೊಂದಿಗೆ ಚರ್ಚಿಸುವುದಾಗಿ ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com