ದೇಶದಾದ್ಯಂತ 73.82 ಕೋಟಿ ಡೋಸ್‌ ಲಸಿಕೆ ವಿತರಣೆ: ಕೇಂದ್ರ ಸರ್ಕಾರ

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 72,86,883 ಮಂದಿಗೆ ಕೋವಿಡ್ ಲಸಿಕೆ ನೀಡುವುದರೊಂದಿಗೆ ಇದೂವರೆಗೆ ಲಸಿಕೆ ವಿತರಣೆ ಪ್ರಮಾಣ 73.82 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 72,86,883 ಮಂದಿಗೆ ಕೋವಿಡ್ ಲಸಿಕೆ ನೀಡುವುದರೊಂದಿಗೆ ಇದೂವರೆಗೆ ಲಸಿಕೆ ವಿತರಣೆ ಪ್ರಮಾಣ 73.82 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ 18 ರಿಂದ 44 ವರ್ಷದೊಳಗಿನ 29.67 ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದರೆ, 42.83 ಕೋಟಿ ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆಂದು ತಿಳಿಸಿದೆ. 

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 28,591 ಹೊಸ ಕೇಸ್ ಪತ್ತೆಯಾಗಿದ್ದು 338 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 69,90,62,776 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 72.21 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ 

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 72.21 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ. 
ಈವರೆಗೆ ಕೇಂದ್ರವು ರಾಜ್ಯಗಳಿಗೆ 72.21  (72,21,17,085) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 5,16,66,835 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.

ಇನ್ನು ಕೆಲವೇ ದಿನಗಳಲ್ಲಿ 57,56,240 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com