ಪೆಗಾಸಸ್‌ನ ವಿವರವಾದ ಅಫಿಡವಿಟ್ ಸಲ್ಲಿಸಲು ಕೇಂದ್ರ ನಿರಾಕರಣೆ; ನಂಬಲು ಸಾಧ್ಯವಾಗುತ್ತಿಲ್ಲ: ಸುಪ್ರಿಂ'ಗೆ ಅರ್ಜಿದಾರರು

ಪೆಗಾಸಸ್ ಸ್ನೂಪಿಂಗ್ ಪ್ರಕರಣದ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿವರವಾದ ಅಫಿಡವಿಟ್ ಸಲ್ಲಿಸಲು ಕೇಂದ್ರ ಸರ್ಕಾರವು ನಿರಾಕರಿಸುತ್ತಿರುವುದು 'ನಂಬಲು ಸಾಧ್ಯವಾಗುತ್ತಿಲ್ಲ' ಎಂದು ಅರ್ಜಿದಾರರೊಬ್ಬರು ಸುಪ್ರೀಂ ಕೋರ್ಟ್‌ಗೆ ಹೇಳಿದ್ದಾರೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಪೆಗಾಸಸ್ ಸ್ನೂಪಿಂಗ್ ಪ್ರಕರಣದ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿವರವಾದ ಅಫಿಡವಿಟ್ ಸಲ್ಲಿಸಲು ಕೇಂದ್ರ ಸರ್ಕಾರವು ನಿರಾಕರಿಸುತ್ತಿರುವುದು 'ನಂಬಲು ಸಾಧ್ಯವಾಗುತ್ತಿಲ್ಲ' ಎಂದು ಅರ್ಜಿದಾರರೊಬ್ಬರು ಸುಪ್ರೀಂ ಕೋರ್ಟ್‌ಗೆ ಹೇಳಿದ್ದಾರೆ. 

ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ನ್ಯಾಯಪೀಠಕ್ಕೆ ಹಿರಿಯ ಪತ್ರಕರ್ತರಾದ ಎನ್ ರಾಮ್ ಮತ್ತು ಶಶಿ ಕುಮಾರ್ ಅವರ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಅವರು ಅರ್ಜಿ ಸಲ್ಲಿಸಿದರು. 'ನಿಮ್ಮ ಕಣ್ಣು ಮುಚ್ಚಿ' ಎಂದು ಸುಪ್ರೀಂ ಕೋರ್ಟ್‌ಗೆ ಎಂದು ಹೇಳಲು ಸಾಧ್ಯವಿಲ್ಲ. 

ನಾವು ನ್ಯಾಯಾಲಯಕ್ಕೆ ಹೇಳುವುದಿಲ್ಲ ಎಂದು ಭಾರತ ಸರ್ಕಾರ ಹೇಳುತ್ತಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಸಿಬಲ್, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದರು.

ಕೇಂದ್ರ ಸರ್ಕಾರವು ತನ್ನ ನಾಗರಿಕರಿಗೆ ವಾಸ್ತವಿಕ ವಿಷಯವನ್ನು ಹೇಳುವುದು ಕರ್ತವ್ಯವಾಗಿದೆ. ಅದನ್ನು ಬಿಟ್ಟು ಪ್ರಭುತ್ವಕ್ಕೆ ಆಂತರಿಕ ವಿಚಾರಣೆಯ ಮೂಲಕ ನಾವು ನಮಗೆ ಬೇಕಾದುದನ್ನು ನಾವು ಮಾಡುತ್ತೇವೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಸಿಬಲ್ ಹೇಳಿದರು. 

ವಿಚಾರಣೆಯ ವೇಳೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು 'ದೇಶದ ಹಿತಾಸಕ್ತಿ' ವಿಷಯದಲ್ಲಿ ವಿವರವಾದ ಅಫಿಡವಿಟ್ ಸಲ್ಲಿಸಲು ಆಗುವುದಿಲ್ಲ. ಏಕೆಂದರೆ ಇಂತಹ ಸಮಸ್ಯೆಗಳು ಸಾರ್ವಜನಿಕ ಚರ್ಚೆಯ ವಿಷಯವಾಗಿರಬಾರದು.

ಅರ್ಜಿದಾರರು ಇಸ್ರೇಲಿ ಸಂಸ್ಥೆಯ ಎನ್ಎಸ್ಒ ನ ಸ್ಪೈವೇರ್ ಪೆಗಾಸಸ್ ಅನ್ನು ಕೆಲವು ಪ್ರಖ್ಯಾತ ಭಾರತೀಯರ ಮೇಲ್ವಿಚಾರಣೆಗೆ ಬಳಸಲಾಗಿದೆಯೇ ಎಂದು ತಿಳಿಯಲು ಬಯಸುತ್ತಾರೆ. ಇದು ದೇಶದ ಯಾವುದೇ ರಹಸ್ಯಗಳನ್ನು ಬಹಿರಂಗಪಡಿಸುವುದಿಲ್ಲ ಅಥವಾ ರಾಷ್ಟ್ರೀಯ ಭದ್ರತೆಯ ಮೇಲೆ ಯಾವ ಪರಿಣಾಮ ಬೀರುವುದಿಲ್ಲ ಎಂದು ಸಿಬಲ್ ಹೇಳಿದರು. "ನನ್ನ ಸ್ನೇಹಿತ (ಮೆಹ್ತಾ) ಆ ಪ್ರಮಾಣವನ್ನೇ ಹೇಳುವುದು ರಾಷ್ಟ್ರೀಯ ಭದ್ರತೆಗೆ ಹಾನಿಕಾರಕವಾಗಿದೆ. ಕ್ಷಮಿಸಿ, ಇದು ನ್ಯಾಯ ಪ್ರಕ್ರಿಯೆಗೆ ಹಾನಿಕಾರಕ ಎಂದು ಹಿರಿಯ ವಕೀಲರು ಹೇಳಿದರು.

ಕೇಂದ್ರವು ಈ ಹಿಂದೆ ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ಟು ಸಲ್ಲಿಸಿ ಪೆಗಾಸಸ್ ಬೇಹುಗಾರಿಕೆಗೆ ಸಂಬಂಧಪಟ್ಟಂತೆ ಸ್ವತಂತ್ರ ತನಿಖೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಊಹೆ ಮತ್ತು ಪರಿಕಲ್ಪನೆ ಅಥವಾ ಇತರ ಆಧಾರರಹಿತ ಮಾಧ್ಯಮ ವರದಿಗಳು ಅಥವಾ ಅಪೂರ್ಣ ದೃಢೀಕರಿಸದ ವರದಿಗಳ ಆಧಾರವಾಗಿದೆ. ಈ ವಿವಾದ ಬಗ್ಗೆ ಸರ್ಕಾರದ ನಿಲುವನ್ನು ಈಗಾಗಲೇ ಸಂಸತ್ತಿನಲ್ಲಿ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಸ್ಪಷ್ಟಪಡಿಸಿದ್ದಾರೆ ಎಂದು  ಸಾಲಿಸಿಟರ್ ಜನರಲ್ ಇಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com