ಎಲ್ ಜೆಪಿ ಸಂಸದ, ಚಿರಾಗ್ ಪಾಸ್ವಾನ್ ಸಂಬಂಧಿ ಪ್ರಿನ್ಸ್ ರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ಲೋಕ ಜನಶಕ್ತಿ ಪಾರ್ಟಿ ಸಂಸದ ಪ್ರಿನ್ಸ್ ಪಾಸ್ವಾನ್ ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
Published: 14th September 2021 11:54 AM | Last Updated: 14th September 2021 11:54 AM | A+A A-

ಎಲ್ ಜೆಪಿ ಸಂಸದ ಪ್ರಿನ್ಸ್ ಪಾಸ್ವಾನ್
ನವದೆಹಲಿ: ಲೋಕ ಜನಶಕ್ತಿ ಪಾರ್ಟಿ ಸಂಸದ ಪ್ರಿನ್ಸ್ ಪಾಸ್ವಾನ್ ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ನ್ಯಾಯಾಲಯದ ನಿರ್ದೇಶನದಂತೆ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಲ್ಲಿ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರಿನ್ಸ್ ಬಿಹಾರದ ಸಮಷ್ಟಿಪುರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಚಿರಾಗ್ ಪಾಸ್ವಾನ್ ಈ ವರ್ಷದ ಜೂನ್ ನಲ್ಲಿ ಪ್ರಿನ್ಸ್ ವಿರುದ್ಧ ಲೈಂಗಿಕ ದೌರ್ಜನ್ಯದ ದೂರನ್ನು ಉಲ್ಲೇಖಿಸಿದ್ದರು.
ಪಾರ್ಟಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಯೊಬ್ಬರು ನೀಡಿದ ದೂರಿನಲ್ಲಿ, ಪ್ರಿನ್ಸ್ ರಾಜ್ ತನ್ನಗೆ ಕುಡಿಸಿದ ನಂತರ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿದ್ದಾಳೆ.