ಹರಿಯಾಣದ ಕರ್ನಾಲ್ ನಲ್ಲಿ ರೈತರ ಪ್ರತಿಭಟನೆ
ಹರಿಯಾಣದ ಕರ್ನಾಲ್ ನಲ್ಲಿ ರೈತರ ಪ್ರತಿಭಟನೆ

ರೈತರ ಪ್ರತಿಭಟನೆ ಸಂಬಂಧ 4 ರಾಜ್ಯಗಳ ಸರ್ಕಾರಗಳಿಗೆ ನೋಟೀಸ್ ಕಳಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ರೈತರ ಪ್ರತಿಭಟನೆಯಿಂದಾಗಿ ದೇಶಾದ್ಯಂತ 9,000 ಸಣ್ಣ, ಮಧ್ಯಮ ಮತ್ತು ದೊಡ್ಡ ಕಂಪನಿಗಳಿಗೆ ನಷ್ಟ ಸಂಭವಿಸಿದೆ. ಈ ಬಗ್ಗೆ ತನ್ನ ಬಳಿ ದೂರುಗಳು ಬರುತ್ತಲೇ ಇರುವುದಾಗಿ ಆಯೋಗ ತಿಳಿಸಿದೆ. 

ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರೈತರ ಪ್ರತಿಭಟನೆ ಸಂಬಂಧ ದೆಹಲಿ, ಉತ್ತರಪ್ರದೇಶ, ಹರಿಯಾಣ ಮತ್ತು ರಾಜಸ್ಥಾನ ರಾಜ್ಯ ಸರ್ಕಾರಗಳಿಗೆ ನೋಟೀಸ್ ಕಳುಹಿಸಿದೆ. 

ದೇಶದಲ್ಲಿ ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆಯಿಂದಾಗಿ ಸಾರಿಗೆ, ಕಾರ್ಖಾನೆ ಉದ್ದಿಮೆ ಹಾಗೂ ಕೊರೊನಾ ಮಾರ್ಗಸೂಚಿ ಪಾಲನೆ ವಿಷಯಗಳಲ್ಲಿ ದುಷ್ಪರಿಣಾಮ ಉಂಟಾಗಿದೆ ಎಂದು ನೋಟೀಸ್ ನಲ್ಲಿ ಹೇಳಿದೆ. 

ರೈತರ ಪ್ರತಿಭಟನೆಯಿಂದಾಗಿ 9000 ಸಣ್ಣ, ಮಧ್ಯಮ ಮತ್ತು ದೊಡ್ಡ ಕಂಪನಿಗಳಿಗೆ ನಷ್ಟ ಸಂಭವಿಸಿದೆ. ಈ ಬಗ್ಗೆ ತನ್ನ ಬಳಿ ದೂರುಗಳು ಬರುತ್ತಲೇ ಇರುವುದಾಗಿ ಆಯೋಗ ತಿಳಿಸಿದೆ. 

ಅಲ್ಲದೆ ರೈತರ ಪ್ರತಿಭಟನೆ ನಡೆಯುತ್ತಿರುವ ಸ್ಥಳಗಳಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಸಂಭವಿಸುತ್ತಿದೆ. ರಾಜ್ಯಸರ್ಕಾರಗಳು ಈ ನಗ್ಗೆ ನಿರ್ಲಕ್ಷ್ಯ ತೋರಿರುವುದಾಗಿ ಆಯೋಗ ಆರೋಪಿಸಿದೆ.  

Related Stories

No stories found.

Advertisement

X
Kannada Prabha
www.kannadaprabha.com