ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿಲ್ಲ: ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ್
ಕೋವಿಡ್ -19 ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸರ್ಕಾರ ವೈಜ್ಞಾನಿಕ ಮತ್ತು ಆರೋಗ್ಯದ ದೃಷ್ಟಿಯಿಂದ ಯಾವುದೇ ಚಿಂತನೆ ನಡೆಸಿಲ್ಲ. ಪ್ರಸ್ತುತ 2 ಡೋಸ್ ಲಸಿಕೆ ನೀಡುವುದೇ ನಮ್ಮ ಮುಂದಿರುವ ಆದ್ಯತೆ ಎಂದು ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ್ ತಿಳಿಸಿದ್ದಾರೆ.
Published: 16th September 2021 10:16 PM | Last Updated: 16th September 2021 10:16 PM | A+A A-

ಬಲರಾಮ್ ಭಾರ್ಗವ
ನವದೆಹಲಿ: ಕೋವಿಡ್ -19 ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸರ್ಕಾರ ವೈಜ್ಞಾನಿಕ ಮತ್ತು ಆರೋಗ್ಯದ ದೃಷ್ಟಿಯಿಂದ ಯಾವುದೇ ಚಿಂತನೆ ನಡೆಸಿಲ್ಲ. ಪ್ರಸ್ತುತ 2 ಡೋಸ್ ಲಸಿಕೆ ನೀಡುವುದೇ ನಮ್ಮ ಮುಂದಿರುವ ಆದ್ಯತೆ ಎಂದು ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ್ ತಿಳಿಸಿದ್ದಾರೆ.
ಎರಡೂ ಡೋಸ್‌ಗಳನ್ನು ನೀಡುವುದು ಅತ್ಯಗತ್ಯ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಈ ಸಮಯದಲ್ಲಿ ಬೂಸ್ಟರ್ ಡೋಸ್ ನೀಡುವುದು ಕೇಂದ್ರದ ವಿಷಯವಲ್ಲ ಎಂಬುದನ್ನು ನಾವು ಸ್ಪಷ್ಟಪಡಿಸುತ್ತೇನೆ ಎಂದು ಭಾರ್ಗವ ಹೇಳಿದರು.
ಪ್ರತಿಕಾಯಗಳ ಮಟ್ಟವನ್ನು ಅಳೆಯಬಾರದು ಎಂದು ಹಲವಾರು ಏಜೆನ್ಸಿಗಳು ಶಿಫಾರಸು ಮಾಡಿವೆ. ಆದರೆ ಮುಖ್ಯವಾದ ತಿಳುವಳಿಕೆಯೆಂದರೆ ಎರಡೂ ಡೋಸ್‌ಗಳಿಗೆ ಸಂಪೂರ್ಣ ವ್ಯಾಕ್ಸಿನೇಷನ್ ಮಾಡುವುದು ಅತ್ಯಗತ್ಯ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಹೇಳಿದರು.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ಭಾರತದ ವಯಸ್ಕ ಜನಸಂಖ್ಯೆಯ ಶೇ. 20ರಷ್ಟು ಜನರು ಕೋವಿಡ್ -19 ಲಸಿಕೆಯ ಎರಡು ಡೋಸ್ ಪಡೆದಿದ್ದಾರೆ. ಇನ್ನು ಶೇ. 62ರಷ್ಟು ಜನರು ಕನಿಷ್ಠ ಒಂದು ಡೋಸ್ ಪಡೆದಿದ್ದಾರೆ. ಅಲ್ಲದೆ, 99 ಪ್ರತಿಶತ ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಪಡೆದಿದ್ದಾರೆ. 82 ಪ್ರತಿಶತ ಅರ್ಹ ಆರೋಗ್ಯ ಕಾರ್ಯಕರ್ತರು ಎರಡನೇ ಡೋಸ್ ತೆಗೆದುಕೊಂಡಿದ್ದಾರೆ.