ಪಾಕಿಸ್ತಾನಕ್ಕೆ ಬೇಹುಗಾರಿಕೆ: ಪೊಲೀಸರಿಂದ ಗ್ಯಾಸ್ ಏಜೆನ್ಸಿ ಮಾಲೀಕನ ಬಂಧನ!
ಭಾರತೀಯ ಸೇನೆಯ ಚಲನವಲನದ ಮಾಹಿತಿಯನ್ನು ಪಾಕಿಸ್ತಾನದ ನಿರ್ವಾಹಕರಿಗೆ ರವಾನಿಸಿದ ಆರೋಪದ ಮೇಲೆ ರಾಜಸ್ಥಾನದ ಜುಂಜುನು ಜಿಲ್ಲೆಯ ಎಲ್‌ಪಿಜಿ ಸಿಲಿಂಡರ್ ವಿತರಣಾ ಏಜೆನ್ಸಿಯ ಮಾಲೀಕರನ್ನು ಬಂಧಿಸಲಾಗಿದೆ.
Published: 16th September 2021 11:22 PM | Last Updated: 17th September 2021 01:20 PM | A+A A-

ಸಾಂದರ್ಭಿಕ ಚಿತ್ರ
ಜೈಪುರ: ಭಾರತೀಯ ಸೇನೆಯ ಚಲನವಲನದ ಮಾಹಿತಿಯನ್ನು ಪಾಕಿಸ್ತಾನದ ನಿರ್ವಾಹಕರಿಗೆ ರವಾನಿಸಿದ ಆರೋಪದ ಮೇಲೆ ರಾಜಸ್ಥಾನದ ಜುಂಜುನು ಜಿಲ್ಲೆಯ ಎಲ್‌ಪಿಜಿ ಸಿಲಿಂಡರ್ ವಿತರಣಾ ಏಜೆನ್ಸಿಯ ಮಾಲೀಕರನ್ನು ಬಂಧಿಸಲಾಗಿದೆ.
ರಾಜಸ್ಥಾನ ಪೊಲೀಸರು ಮತ್ತು ಸೇನಾ ಗುಪ್ತಚರ ವಿಭಾಗದ ಜಂಟಿ ಕಾರ್ಯಾಚರಣೆ ನಡೆಸಿ ಗೂಢಚರ್ಯೆ ಆರೋಪದ ಮೇಲೆ ಜುಂಜುನು ಜಿಲ್ಲೆಯ ನರಹರ್ ಗ್ರಾಮದ ನಿವಾಸಿ 30 ವರ್ಷದ ಸಂದೀಪ್ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ.
ಸೇನಾ ವಿಭಾಗದಕ್ಕೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಿತರಿಸುವಾಗ ಸಂದೀಪ್ ಭಾರತೀಯ ಸೇನೆಗೆ ಸಂಬಂಧಿಸಿದ ಕಾರ್ಯತಂತ್ರದ ಮಾಹಿತಿ ಮತ್ತು ಛಾಯಾಚಿತ್ರಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಸೇನಾ ನೆಲೆಯ ಸೂಕ್ಷ್ಮ ಮಾಹಿತಿ ಮತ್ತು ಛಾಯಾಚಿತ್ರಗಳನ್ನು ನೀಡಲು ಆರೋಪಿಗೆ ಪಾಕಿಸ್ತಾನದ ಗೂಢಚರ್ಯರು ಹಣದ ಆಮಿಷ ನೀಡಿದ್ದರು. ಆರೋಪಿಯನ್ನು ಸೆಪ್ಟೆಂಬರ್ 12ರಂದು ವಿಚಾರಣೆಗಾಗಿ ಬಂಧಿಸಲಾಗಿದೆ ಎಂದು ಡಿಜಿಪಿ(ಗುಪ್ತಚರ) ಉಮೇಶ್ ಮಿಶ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.