ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತ ಹೇಳಿಕೆಗಳು ದುರುದ್ದೇಶಪೂರಿತ: ಸಿಪಿಐ

ಜೆಎನ್ ಯು ವಿದ್ಯಾರ್ಥಿ ಘಟಕದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇಂತಹ ಹೇಳಿಕೆಗಳು ದುರುದ್ದೇಶಪೂರಿತವಾಗಿವೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಹೇಳಿದ್ದಾರೆ.
ಕನ್ಹಯ್ಯ ಕುಮಾರ್
ಕನ್ಹಯ್ಯ ಕುಮಾರ್

ನವದೆಹಲಿ: ಜೆಎನ್ ಯು ವಿದ್ಯಾರ್ಥಿ ಘಟಕದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇಂತಹ ಹೇಳಿಕೆಗಳು ದುರುದ್ದೇಶಪೂರಿತವಾಗಿವೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಹೇಳಿದ್ದಾರೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ಕನ್ಹಯ್ಯ ಕುಮಾರ್ ಜೊತೆಗೆ ಸಭೆ ನಡೆಸಿದ ಬಳಿಕ ರಾಜಾ ಹೇಳಿಕೆ ಈ ರೀತಿಯ ಹೇಳಿಕೆ ನೀಡಿದ್ದಾರೆ. ಆದರೆ, ಕನ್ಹಯ್ಯ ಶೀಘ್ರದಲ್ಲೇ ಪಕ್ಷ ಸೇರಲಿದ್ದಾರೆ ಎಂದು ಕಾಂಗ್ರೆಸ್ ಹೇಳುತ್ತಿದೆ. 

ಕನ್ಹಯ್ಯ ಕುಮಾರ್ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸದಸ್ಯರಾಗಿದ್ದು, ಕಳೆದ ಎರಡು ದಿನಗಳ ಕಾಲ ಪಕ್ಷದ ಕಚೇರಿಯಲ್ಲಿ ಅವರೊಂದಿಗೆ ಸಭೆ ನಡೆಸಲಾಗಿದೆ. ದುರುದ್ದೇಶಪೂರಿತ ಊಹಾಪೋಹಾಗಳು ಕೇವಲ ವದಂತಿಗಳು, ಅವುಗಳನ್ನು ಖಂಡಿಸುವುದಾಗಿ ರಾಜಾ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. 

ಕನ್ಹಯ್ಯ ಕುಮಾರ್ ಅವರನ್ನು ರಾಹುಲ್ ಗಾಂಧಿ ಕರೆದಿರುವ ಕುರಿತಂತೆ ಪ್ರತಿಕ್ರಿಯಿಸಿದ ರಾಜಾ, ರಾಹುಲ್ ಗಾಂಧಿ ರಾಜಕೀಯ ಮುಖಂಡರೊಂದಿಗೆ ಚರ್ಚಿಸಲು ಮುಕ್ತರಾಗಿದ್ದಾರೆ. ಹಾಗೆಂದ ಮಾತ್ರಕ್ಕೆ ಕನ್ಹಯ್ಯ ಪಕ್ಷ ತೊರೆಯುತ್ತಿದ್ದಾರೆ ಎಂಬರ್ಥವಲ್ಲಾ ಎಂದು ಹೇಳಿದರು.

ಕನ್ಹಯ್ಯ ಕುಮಾರ್ ಕಾಂಗ್ರೆಸ್ ಹೈ ಕಮಾಂಡ್ ನೊಂದಿಗೆ ಸಂಪರ್ಕದಲ್ಲಿದ್ದು, ಶೀಘ್ರದಲ್ಲಿಯೇ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆದರೆ, ಈ ಕುರಿತಂತೆ ಕನ್ಹಯ್ಯ ಕುಮಾರ್ ಮೌನ ವಹಿಸಿದ್ದಾರೆ. ಕನ್ಹಯ್ಯ ಪಕ್ಷದಲ್ಲಿ ಮುಂದುವರೆಯಲಿದ್ದಾರೆ ಎಂದು ಸಿಪಿಐ ಹೇಳುತ್ತಿದ್ದರೆ,  ಬಿಹಾರದಲ್ಲಿ ಪಕ್ಷ ಬಲವರ್ಧನೆಗಾಗಿ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com