ಜಮ್ಮು ಮತ್ತು ಕಾಶ್ಮೀರ: ಮನೆಯೊಂದರಲ್ಲಿ ಅನುಮಾನಾಸ್ಪದ ಸ್ಫೋಟ: ಯುವತಿ ಸಾವು, 6 ಮಂದಿಗೆ ಗಾಯ!
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮನೆಯೊಂದರಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಲ್ಲಿ ಯುವತಿಯೋರ್ವಳು ಸಾವನ್ನಪ್ಪಿದ್ದಾಳೆ.
Published: 17th September 2021 12:34 AM | Last Updated: 17th September 2021 12:34 AM | A+A A-

ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮನೆಯೊಂದರಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಲ್ಲಿ ಯುವತಿಯೋರ್ವಳು ಸಾವನ್ನಪ್ಪಿದ್ದಾಳೆ.
ಮನೆಯಲ್ಲಿ ಶೇಖರಿಸಿದ್ದ ಶೆಲ್‌ಗಳು ಮತ್ತು ಗ್ರೆನೇಡ್‌ಗಳನ್ನು ಒಳಗೊಂಡ ಸ್ಕ್ರ್ಯಾಪ್ ವಸ್ತುಗಳಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನು ಸ್ಫೋಟದಲ್ಲಿ 17 ವರ್ಷದ ಬಾಲಕಿ ಶಬ್ನಮ್ ವಾನಿ ಸಾವನ್ನಪ್ಪಿದ್ದು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ 8ರ ಸುಮಾರಿಗೆ ಜಿಲ್ಲೆಯ ಹಂದ್ವಾರ ಪ್ರದೇಶದ ತಾರತ್ಪೋರಾದ ಗುಲಾಂ ಅಹ್ಮದ್ ವಾನಿಯ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಸಾಮಗ್ರಿ ಮತ್ತು ಗ್ರೆನೇಡ್ ಅನ್ನು ಬಹುಶಃ ಮನೆಯಲ್ಲಿ ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.