ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ: ಸುಪ್ರೀಂ ಕೋರ್ಟ್ ಕೊಲಿಜಿಯಂನಿಂದ ಎಂಟು ಹೆಸರು ಶಿಫಾರಸು

ಸಿಜೆಐ ಎನ್ ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ, ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಾಧೀಶ ರಾಜೇಶ್ ಬಿಂದಾಲ್ ಸೇರಿದಂತೆ ಎಂಟು ನ್ಯಾಯಾಧೀಶರ ಹೆಸರನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಸಿಜೆಐ ಎನ್ ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ, ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಾಧೀಶ ರಾಜೇಶ್ ಬಿಂದಾಲ್ ಸೇರಿದಂತೆ ಎಂಟು ನ್ಯಾಯಾಧೀಶರ ಹೆಸರನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಹುದ್ದೆಗೆ ಶಿಫಾರಸು ಮಾಡಿದೆ.

ಗುರುವಾರ ಮತ್ತು ಶುಕ್ರವಾರ ನಡೆದ ಕೊಲಿಜಿಯಂ ಮ್ಯಾರಥಾನ್ ಸಭೆಯಲ್ಲಿ ವಿವಿಧ ಹೈಕೋರ್ಟ್ ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ ಮತ್ತು ತ್ರಿಪುರಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಕಿಲ್ ಕುರೇಶಿ ಹಾಗೂ ಇತರ 28 ಹೈಕೋರ್ಟ್ ನ್ಯಾಯಾಧೀಶರು ಸೇರಿದಂತೆ ಐವರು ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆಗೂ ಶಿಫಾರಸು ಮಾಡಲಾಗಿದೆ ಎಂದು ವಿಶ್ವಾಸಾರ್ಹ ಮೂಲಗಳು ಪಿಟಿಐಗೆ ತಿಳಿಸಿವೆ.

ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಬಿಂದಾಲ್ ಅವರು ಇತ್ತೀಚಿಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವಿನ ರಾಜಕೀಯ ನಿಲುವಿಗೆ ಸಂಬಂಧಿಸಿದಂತೆ ತಮ್ಮ ಆಡಳಿತಾತ್ಮಕ ಮತ್ತು ನ್ಯಾಯಾಂಗ ನಿರ್ಧಾರಗಳಿಂದಾಗಿ ಸುದ್ದಿಯಾಗಿದ್ದರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಮೂವರು ಸದಸ್ಯರ ಕೊಲಿಜಿಯಂ, ಮಧ್ಯಪ್ರದೇಶ, ಅಲಹಾಬಾದ್, ಕಲ್ಕತ್ತಾ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮೇಘಾಲಯ, ಗುಜರಾತ್ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಹೆಸರನ್ನು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com