ಮಹಾರಾಷ್ಟ್ರ: 6 ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ನಿರಂತರ ಅತ್ಯಾಚಾರ; 42 ವರ್ಷದ ಆರೋಪಿ ಬಂಧನ

6 ವರ್ಷ ಸೋದರ ಸಂಬಂಧಿ ಬಾಲಕಿಯನ್ನು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸನಗರ ಪಟ್ಟಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಥಾಣೆ: 6 ವರ್ಷ ಸೋದರ ಸಂಬಂಧಿ ಬಾಲಕಿಯನ್ನು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸನಗರ ಪಟ್ಟಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

42 ವರ್ಷದ ಆರೋಪಿಯನ್ನು ನಿನ್ನೆ ಬಂಧಿಸಲಾಗಿದೆ ಎಂದು ಥಾಣೆಯ ಹಿಲ್ ಲೇನ್ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. 

ಬಾಲಕಿಯ ನೆರೆ ಮನೆಯಲ್ಲಿಯೇ ವಾಸವಿದ್ದ ಆರೋಪಿಯು ಆಟವಾಡುವ ನೆಪದಲ್ಲಿ ತನ್ನ ಮನೆಗೆ ಆಗಾಗ ಕರೆದುಕೊಂಡು ಹೋಗುತ್ತಿದ್ದ. ಅಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ. ಕೆಲ ದಿನಗಳ ಹಿಂದೆ ಬಾಲಕಿಯ ಹಿರಿಯ ಸೋದರನಿಗೆ ಆರೋಪಿ ಕುಕೃತ್ಯವೆಸಗಿರುವುದು ಕಂಡು ಪೋಷಕರಿಗೆ ತಿಳಿಸಿದ್ದಾನೆ. ಅವರು ಪೊಲೀಸರನ್ನು ಸಂಪರ್ಕಿಸಿ ವ್ಯಕ್ತಿ ವಿರುದ್ಧ ದೂರು ಸಲ್ಲಿಸಿದ್ದರು.

ಬಾಲಕಿ ಮೇಲೆ ವೈದ್ಯಕೀಯ ಪರೀಕ್ಷೆ ಮಾಡಲಾಗಿದ್ದು ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಪೊಲೀಸರು ಆರೋಪಿಯನ್ನು ಬಂಧಿಸಿ ಐಪಿಸಿ ಸೆಕ್ಷನ್ 376ರಡಿ ಮತ್ತು ಪೊಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ. ಸ್ಥಳೀಯ ನ್ಯಾಯಾಲಯ ಮುಂದೆ ಆರೋಪಿಯನ್ನು ಹಾಜರುಪಡಿಸಲಾಗಿದ್ದು ಆರೋಪಿಯನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೊಪ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com