ಭಾರತ ಅಕ್ಟೋಬರ್‌ನಲ್ಲಿ ಹೆಚ್ಚುವರಿ ಕೋವಿಡ್ ಲಸಿಕೆ ರಫ್ತು ಪುನರಾರಂಭಿಸಲಿದೆ: ಕೇಂದ್ರ ಸಚಿವ

ಈ ವರ್ಷದ ಏಪ್ರಿಲ್‌ನಲ್ಲಿ ಕೋವಿಡ್ ಎರಡನೇ ಅಲೆಯಿಂದ ತತ್ತರಿಸಿದ ಭಾರತ ಕೋವಿಡ್ ಲಸಿಕೆಗಳ ರಫ್ತನ್ನು ಹಠಾತ್ತಾಗಿ ಸ್ಥಗಿತಗೊಳಿಸಿತ್ತು. ಈಗ ಅದನ್ನು ಮತ್ತೆ ಅಕ್ಟೋಬರ್‌ನಿಂದ ಆರಂಭಿಸಲಾಗುವುದು..
ಮಹಿಳೆಯೊಬ್ಬರಿಗೆ ಆರೋಗ್ಯ ಕಾರ್ಯಕರ್ತರು ಲಸಿಕೆ ನೀಡುತ್ತಿರುವ ಚಿತ್ರ
ಮಹಿಳೆಯೊಬ್ಬರಿಗೆ ಆರೋಗ್ಯ ಕಾರ್ಯಕರ್ತರು ಲಸಿಕೆ ನೀಡುತ್ತಿರುವ ಚಿತ್ರ

ನವದೆಹಲಿ: ಈ ವರ್ಷದ ಏಪ್ರಿಲ್‌ನಲ್ಲಿ ಕೋವಿಡ್ ಎರಡನೇ ಅಲೆಯಿಂದ ತತ್ತರಿಸಿದ ಭಾರತ ಕೋವಿಡ್ ಲಸಿಕೆಗಳ ರಫ್ತನ್ನು ಹಠಾತ್ತಾಗಿ ಸ್ಥಗಿತಗೊಳಿಸಿತ್ತು. ಈಗ ಅದನ್ನು ಮತ್ತೆ ಅಕ್ಟೋಬರ್‌ನಿಂದ ಆರಂಭಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಸೋಮವಾರ ಹೇಳಿದ್ದಾರೆ.

ಅಕ್ಟೋಬರ್ 2021 ರಿಂದ ಆರಂಭವಾಗುವ ನಾಲ್ಕನೇ ತ್ರೈಮಾಸಿಕದಲ್ಲಿ "ಲಸಿಕೆ ಮೈತ್ರಿ" ಕಾರ್ಯಕ್ರಮದ ಅಡಿಯಲ್ಲಿ ಲಸಿಕೆಯ ರಫ್ತು ಪುನರಾರಂಭವಾಗಲಿದೆ ಎಂದು ಮಾಂಡವಿಯಾ ಅವರು ತಿಳಿಸಿದ್ದಾರೆ.

ಭಾರತೀಯರಿಗೆ ಕೋವಿಡ್ ಲಸಿಕೆ ನೀಡುವುದು ಕೇಂದ್ರ ಸರ್ಕಾರದ ಮೊದಲ ಆದ್ಯತೆಯಾಗಿದೆ. ಆದರೆ ಹೆಚ್ಚುವರಿ ಕೋವಿಡ್ ಲಸಿಕೆಯನ್ನು ರಫ್ತು ಮಾಡಲಾಗುವುದು. "ಕೋವ್ಯಾಕ್ಸ್ ಬಗ್ಗೆ ಭಾರತದ ಬದ್ಧತೆಯನ್ನು ಪೂರೈಸುವ ಸಲುವಾಗಿ ಭಾರತ "ಲಸಿಕೆ ಮೈತ್ರಿ" ಅಡಿಯಲ್ಲಿ ಲಸಿಕೆಗಳ ರಫ್ತನ್ನು ಪುನರಾರಂಭಿಸಲಿದೆ ಎಂದಿದ್ದಾರೆ.

ನಮ್ಮ ಧ್ಯೇಯವಾಕ್ಯವಾದ ವಸುಧೈವ ಕುಟುಂಬಕಂಗೆ ಅನುಗುಣವಾಗಿ ಕೋವಿಡ್ ಲಸಿಕೆ ರಫ್ತು ಮಾಡಲಾಗುವುದು ಎಂದು ಮಾಂಡವೀಯ ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಕೇಂದ್ರವು ವಿವಿಧ ಲಸಿಕೆ ತಯಾರಕರಿಂದ 30 ಕೋಟಿ ಪೂರೈಕೆಯನ್ನು ನಿರೀಕ್ಷಿಸುತ್ತಿದೆ. ಇದು ಮುಂದಿನ ತಿಂಗಳುಗಳಲ್ಲಿ ಕೋವಿಡ್ ಲಸಿಕೆ ಲಭ್ಯತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com