ಮೀಟೂ ಆರೋಪ: ಪಂಜಾಬ್ ನೂತನ ಸಿಎಂ ಚನ್ನಿ ರಾಜಿನಾಮೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹ
ಪಂಜಾಬ್‌ನ ಹೊಸ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಚರಣ್‌ಜಿತ್ ಸಿಂಗ್ ಚನ್ನಿ ಅವರು ಮುಖ್ಯಮಂತ್ರಿಯಾದ ಬೆನ್ನಲ್ಲೇ ಹೊಸ ತಲೆನೋವು ಶುರುವಾಗಿದ್ದು, ಕೂಡಲೇ ಅವರ ರಾಜಿನಾಮೆ ಪಡೆಯುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಆಗ್ರಹಿಸಿದ್ದಾರೆ.
Published: 20th September 2021 11:55 PM | Last Updated: 21st September 2021 02:04 PM | A+A A-

ಪಂಜಾಬ್ ನೂತನ ಸಿಎಂ ಚನ್ನಿ
ನವದೆಹಲಿ: ಪಂಜಾಬ್‌ನ ಹೊಸ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಚರಣ್‌ಜಿತ್ ಸಿಂಗ್ ಚನ್ನಿ ಅವರು ಮುಖ್ಯಮಂತ್ರಿಯಾದ ಬೆನ್ನಲ್ಲೇ ಹೊಸ ತಲೆನೋವು ಶುರುವಾಗಿದ್ದು, ಕೂಡಲೇ ಅವರ ರಾಜಿನಾಮೆ ಪಡೆಯುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಆಗ್ರಹಿಸಿದ್ದಾರೆ.
ಈ ಕುರಿತಂತೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಒತ್ತಾಯ ಹೇರಿದ್ದು, ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಪಂಜಾಬ್ ಗೆ ಇಬ್ಬರು ಉಪ ಮುಖ್ಯಮಂತ್ರಿಗಳು: ಹರೀಶ್ ರಾವತ್
ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ಜೊತೆಗೆ ಮಾತನಾಡಿರುವ ರೇಖಾ ಶರ್ಮಾ, ‘2018 ರಲ್ಲಿ ಮೀಟೂ ಚಳವಳಿಯ ಸಮಯದಲ್ಲಿ ಚರಣಜಿತ್ ಸಿಂಗ್ ಚನ್ನಿ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದೆ. ಪಂಜಾಬ್ ರಾಜ್ಯ ಮಹಿಳಾ ಆಯೋಗವು ಈ ವಿಷಯದ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಚನ್ನಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ರಾಜ್ಯ ಮಹಿಳಾ ಆಯೋಗದ ಆಧ್ಯಕ್ಷರು ಸ್ವತಃ ಧರಣಿ ಕುಳಿತಿದ್ದರು. ಆದರೆ ಏನೂ ಆಗಲಿಲ್ಲ, ಎಂದು ರೇಖಾ ಶರ್ಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಮಹಿಳೆಯೊಬ್ಬರ ನೇತೃತ್ವ ಇರುವ ಪಕ್ಷದಿಂದ ಚನ್ನಿ ಅವರನ್ನು ಪಂಜಾಬ್ ಸಿಎಂ ಮಾಡಲಾಗಿದೆ. ಇದು ನಿಜಕ್ಕೂ ಮಹಿಳೆಯರಿಗಾದ ದ್ರೋಹ. ಚನ್ನಿ ಅವರು ಮಹಿಳೆಯರ ಸುರಕ್ಷತೆಗೆ ಅಪಾಯಕಾರಿ.. ಆವರ ವಿರುದ್ಧ ತನಿಖೆ ನಡೆಸಬೇಕು. ಅವರು ಸಿಎಂ ಆಗಲು ಅರ್ಹರಲ್ಲ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕುವಂತೆ ನಾನು ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸುತ್ತೇನೆ ಎಂದು ರೇಖಾ ಶರ್ಮಾ ಹೇಳಿದ್ದಾರೆ.