ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 79.58 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 79.58 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.
Published: 20th September 2021 12:11 PM | Last Updated: 20th September 2021 12:11 PM | A+A A-

ಸಂಗ್ರಹ ಚಿತ್ರ
ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 79.58 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.
ಈವರೆಗೆ ಕೇಂದ್ರವು ರಾಜ್ಯಗಳಿಗೆ 79.58 (79,58,74,395) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 5,43,43,490 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.
ಇನ್ನು ಕೆಲವೇ ದಿನಗಳಲ್ಲಿ 15,51,940 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 80,85,68,144 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.