ಐಎಎಸ್, ಐಪಿಎಸ್ ಅಧಿಕಾರಿಗಳು ವಿದೇಶಿ ಗಣ್ಯರಿಂದ ಪಡೆದ ಉಡುಗೊರೆ ಉಳಿಸಿಕೊಳ್ಳಲು ಕೇಂದ್ರ ಅವಕಾಶ

ಐಎಎಸ್, ಐಪಿಎಸ್ ಮತ್ತು ಐಎಫ್‌ಒಎಸ್ ಅಧಿಕಾರಿಗಳು ಭಾರತೀಯ ನಿಯೋಗದ ಸದಸ್ಯರಾಗಿದ್ದಾಗ ವಿದೇಶಿ ಗಣ್ಯರಿಂದ ಸ್ವೀಕರಿಸಿದ ಉಡುಗೊರೆಗಳನ್ನು ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಐಎಎಸ್, ಐಪಿಎಸ್ ಮತ್ತು ಐಎಫ್‌ಒಎಸ್ ಅಧಿಕಾರಿಗಳು ಭಾರತೀಯ ನಿಯೋಗದ ಸದಸ್ಯರಾಗಿದ್ದಾಗ ವಿದೇಶಿ ಗಣ್ಯರಿಂದ ಸ್ವೀಕರಿಸಿದ ಉಡುಗೊರೆಗಳನ್ನು ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ.

ಈ ಸಂಬಂಧ 50 ವರ್ಷಗಳ ಹಳೆಯ ನಿಯಮಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಗಳು ಈ ಅಧಿಕಾರಿಗಳಿಗೆ ತಮ್ಮ ಹತ್ತಿರದ ಸಂಬಂಧಿಕರಿಂದ ಅಥವಾ ಅಧಿಕೃತ ವ್ಯವಹಾರಗಳಿಲ್ಲದ ವೈಯಕ್ತಿಕ ಸ್ನೇಹಿತರಿಂದ ಮದುವೆ, ವಾರ್ಷಿಕೋತ್ಸವಗಳು ಮತ್ತು ಇತರೆ ಧಾರ್ಮಿಕ ಕಾರ್ಯಗಳಂತಹ ಸಂದರ್ಭಗಳಲ್ಲಿ ಉಡುಗೊರೆಗಳನ್ನು ಸ್ವೀಕರಿಸಲು ಅವಕಾಶ ಇದೆ.

ಆದರೆ ಅಂತಹ ಉಡುಗೊರೆಯ ಮೌಲ್ಯವು 25,000 ರೂ.ಗಳನ್ನು ಮೀರಿದರೆ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ನಿಯಮಗಳು ಹೇಳುತ್ತವೆ.

ಸಿಬ್ಬಂದಿ ಸಚಿವಾಲಯವು ಈಗ ಈ ನಿಯಮಗಳಿಗೆ ತಿದ್ದುಪಡಿ ಮಾಡಿದ್ದು, ಅಖಿಲ ಭಾರತ ಸೇವೆಗಳ(ನಡವಳಿಕೆ) ನಿಯಮಗಳು, 1968 ರ ಸೆಕ್ಷನ್ 11 ರ ಅಡಿಯಲ್ಲಿ ಹೊಸ ಉಪ ನಿಯಮವನ್ನು ಸೇರಿಸಿದೆ. 

ಹೊಸ ಉಪ ನಿಯಮದ ಪ್ರಕಾರ, ಐಎಎಸ್, ಐಪಿಎಸ್ ಮತ್ತು ಐಎಫ್ ಒಎಸ್ ಅಧಿಕಾರಿಗಳು ಭಾರತೀಯ ನಿಯೋಗದ ಸದಸ್ಯರಾಗಿರುವುದು ಅಥವಾ ಇಲ್ಲದಿದ್ದರೆ ವಿದೇಶಿ ಗಣ್ಯರಿಂದ ಉಡುಗೊರೆಗಳನ್ನು ಸ್ವೀಕರಿಸಬಹುದು ಮತ್ತು ಅವುಗಳನ್ನು ಉಳಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com