ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಹೊಸ ಕೇಸು ಪತ್ತೆ, 252 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 26 ಸಾವಿರದ 115 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 252 ಮಂದಿ ಮೃತಪಟ್ಟಿದ್ದಾರೆ.
Published: 21st September 2021 10:22 AM | Last Updated: 21st September 2021 02:07 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 26 ಸಾವಿರದ 115 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 252 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಒಟ್ಟು ಕೇಸುಗಳ ಸಂಖ್ಯೆ 3 ಕೋಟಿಯ 35 ಲಕ್ಷದ 04 ಸಾವಿರದ 534ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4 ಲಕ್ಷದ 45 ಸಾವಿರದ 385ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 3 ಲಕ್ಷದ 09 ಸಾವಿರದ 575ಕ್ಕೆ ತಲುಪಿದ್ದು, ಈ ನಡುವೆ ಕಳೆದ 24 ಗಂಟೆಗಳಲ್ಲಿ 34 ಸಾವಿರದ 469 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3 ಕೋಟಿಯ 27 ಲಕ್ಷದ 49 ಸಾವಿರದ 574ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ನಿನ್ನೆ ಒಂದೇ 14 ಲಕ್ಷದ 13 ಸಾವಿರದ 951 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ನಿನ್ನೆಯವರೆಗೆ 55,50,35,717 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 81 ಕೋಟಿಯ 85 ಲಕ್ಷದ 13 ಸಾವಿರದ 827 ಜನರಿಗೆ ಲಸಿಕೆಯನ್ನು ನೀಡಲಾಗಿದೆ, ನಿನ್ನೆ ಒಂದೇ ದಿನ 96.46 ಲಕ್ಷಕ್ಕೂ ಅಧಿಕ ಡೋಸ್ ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದೆ.ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 79.74 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
#LargestVaccineDrive #Unite2FightCorona pic.twitter.com/toKgGPTI18
— Ministry of Health (@MoHFW_INDIA) September 21, 2021