ಮುಂದಿನ ವರ್ಷ ಗೋವಾದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಸ್ಥಳೀಯರಿಗೆ ಶೇ. 80 ರಷ್ಟು ಉದ್ಯೋಗ: ಕೇಜ್ರಿವಾಲ್
2022 ರಲ್ಲಿ ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಅಧಿಕಾರಕ್ಕೆ ಬಂದರೆ ಖಾಸಗಿ ಕ್ಷೇತ್ರ ಸೇರಿದಂತೆ ಶೇ .80 ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಮೀಸಲಿಡಲಾಗುವುದು...
Published: 21st September 2021 03:15 PM | Last Updated: 21st September 2021 03:15 PM | A+A A-

ಅರವಿಂದ್ ಕೇಜ್ರಿವಾಲ್
ಪಣಜಿ: 2022 ರಲ್ಲಿ ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಅಧಿಕಾರಕ್ಕೆ ಬಂದರೆ ಖಾಸಗಿ ಕ್ಷೇತ್ರ ಸೇರಿದಂತೆ ಶೇ .80 ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಮೀಸಲಿಡಲಾಗುವುದು ಎಂದು ಎಎಪಿ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಭರವಸೆ ನೀಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್ ಅವರು, ಗಣಿಗಾರಿಕೆ ಮತ್ತು ಪ್ರವಾಸೋದ್ಯಮ ಉದ್ಯಮಗಳು ಸಾಮಾನ್ಯ ಸ್ಥಿತಿಗೆ ಬರುವವರೆಗೆ ಈ ವಲಯಗಳನ್ನು ಅವಲಂಬಿಸಿರುವ ಕುಟುಂಬಗಳಿಗೆ ತಿಂಗಳಿ 5,000 ರೂ.
ನೀಡಲಾಗುವುದು ಎಂದು ಹೇಳಿದ್ದಾರೆ.
ಇದನ್ನು ಓದಿ: ದೆಹಲಿಯಲ್ಲಿ ವಾಯು ಮಾಲೀನ್ಯ ಭೀತಿ: ಈ ವರ್ಷವೂ ಪಟಾಕಿ ಬಳಕೆ, ಮಾರಾಟ ನಿಷೇಧಿಸಿದ ಕೇಜ್ರಿವಾಲ್ ಸರ್ಕಾರ!
ಗೋವಾದಲ್ಲಿ ಪ್ರತಿ ಕುಟುಂಬದಿಂದ ಕನಿಷ್ಠ ಒಬ್ಬ ನಿರುದ್ಯೋಗಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಮತ್ತು ಉದ್ಯೋಗವಿಲ್ಲದ ಯುವಕರಿಗೆ ಉದ್ಯೋಗ ದೊರೆಯುವವರೆಗೆ ಮಾಸಿಕ 3,000 ರೂ. ನೀಡಲಾಗುವುದು ಎಂದು ಕೇಜ್ರಿವಾಲ್ ಅವರು ಭರವಸೆ ನೀಡಿದ್ದಾರೆ.
ಪ್ರಸ್ತುತ ಬಿಜೆಪಿ ಆಡಳಿತದಲ್ಲಿರುವ ಗೋವಾದಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಹೀಗಾಗಿ ಕೇಜ್ರಿವಾಲ್ ಅವರು ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿಗೆ ಗೋವಾಕ್ಕೆ ಭೇಟಿ ನೀಡಿದ್ದಾರೆ.
ಈ ಹಿಂದೆ ಜುಲೈನಲ್ಲಿ ಗೋವಾಗೆ ಭೇಟಿ ನೀಡಿದ ವೇಳೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು, ಗೋವಾದಲ್ಲಿ ತಮ್ಮ ಪಕ್ಷವು ಸರ್ಕಾರ ರಚಿಸಿದರೆ ತಿಂಗಳಿಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಹೇಳಿದ್ದರು.