ಭಾರತೀಯ ವಾಯುಸೇನೆ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ವಿವೇಕ್ ರಾಮ್ ಚೌದರಿ ನೇಮಕ

ಭಾರತೀಯ ವಾಯುಸೇನೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ವಿವೇಕ್ ರಾಮ್ ಚೌದರಿ ನೇಮಕಗೊಂಡಿದ್ದಾರೆ.
ಏರ್ ಮಾರ್ಷಲ್ ವಿವೇಕ್ ರಾಮ್ ಚೌದರಿ
ಏರ್ ಮಾರ್ಷಲ್ ವಿವೇಕ್ ರಾಮ್ ಚೌದರಿ

ನವದೆಹಲಿ: ಭಾರತೀಯ ವಾಯುಸೇನೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ವಿವೇಕ್ ರಾಮ್ ಚೌದರಿ ನೇಮಕಗೊಂಡಿದ್ದಾರೆ.

ಹಾಲಿ ಏರ್ ಚೀಫ್‌ ಮಾರ್ಷಲ್ ಆರ್‌ಕೆಎಸ್‌ ಭದೌರಿಯಾ ಅವರು ಸೆಪ್ಟೆಂಬರ್ 30 ರಂದು ನಿವೃತ್ತರಾಗಲಿದ್ದು, ಅವರ ನಿವೃತ್ತಿ ಬಳಿಕ ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿ ವಿ. ಆರ್‌. ಚೌಧರಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಮಂಗಳವಾರ ತಿಳಿಸಿದೆ.

ಏರ್ ಮಾರ್ಷಲ್ ಚೌಧರಿ ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ‘ಸೆಪ್ಟೆಂಬರ್ 30 ರಂದು ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಅವರು ನಿವೃತ್ತಿ ಹೊಂದುತ್ತಿದ್ದಾರೆ.  ಏರ್ ಮಾರ್ಷಲ್ ವಿ. ಆರ್. ಚೌಧರಿಯನ್ನು ಮುಂದಿನ ವಾಯುಪಡೆಯ ಮುಖ್ಯಸ್ಥರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ’ ಎಂದು ಸಚಿವಾಲಯವು ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ.

ಏರ್ ಮಾರ್ಷಲ್ ಚೌಧರಿ ಅವರು ಡಿಸೆಂಬರ್ 29, 1982 ರಂದು ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com