ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಮೂರು ದಿನಗಳ ಅಮೆರಿಕ ಪ್ರವಾಸ: ಕ್ವಾಡ್ ನಾಯಕರ ಶೃಂಗಸಭೆ, ಯುಎನ್ ಜಿಎಯಲ್ಲಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ಬುಧವಾರದಿಂದ ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಲ್ಲಿ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿದ್ದು 76ನೇ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಉನ್ನತ ಮಟ್ಟದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 
ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬುಧವಾರದಿಂದ ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಲ್ಲಿ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿದ್ದು 76ನೇ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಉನ್ನತ ಮಟ್ಟದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಜೊ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರೊಂದಿಗೆ ದ್ವಿಪಕ್ಷೀಯ ಸಂಬಂಧ ಕುರಿತು ಮಾತುಕತೆ ನಡೆಸಲಿದ್ದಾರೆ.

ಅಮೆರಿಕ ನಾಯಕರ ಜೊತೆ ದ್ವಿಪಕ್ಷೀಯ ಸಂಬಂಧ ಮಾತುಕತೆ, ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳುವಿಕೆ ಮತ್ತು ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನ ಹಾಗೂ ಉದ್ಯಮ ಸಂವಾದದಲ್ಲಿ ಭಾಗಿಯಾಗುವುದು ಪ್ರಧಾನಿ ಮೋದಿಯವರ ಅಮೆರಿಕ ಭೇಟಿಯ ಪ್ರಮುಖ ಕಾರ್ಯಕ್ರಮಗಳು.

ಪ್ರಧಾನಿ ಮೋದಿಯವರೊಂದಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಕೂಡ ತೆರಳುತ್ತಿದ್ದಾರೆ. ಅಲ್ಲಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ಅವರ ಜೊತೆ ಪ್ರಸಕ್ತ ಪ್ರಾದೇಶಿಕ ಭದ್ರತಾ ವಿಚಾರಗಳು, ಅಫ್ಘಾನಿಸ್ತಾನದ ಬೆಳವಣಿಗೆಗಳ ಕುರಿತು ಸೆಪ್ಟೆಂಬರ್ 24ರಂದು ಮಾತುಕತೆ ನಡೆಸಲಿದ್ದಾರೆ. ಮೂಲಭೂತವಾದ, ಉಗ್ರವಾದ, ಗಡಿಯಲ್ಲಿ ಭಯೋತ್ಪಾದನೆ ಮತ್ತು ಜಾಗತಿಕ ಭಯೋತ್ಪಾದನೆ ಜಾಲವನ್ನು ನಿಗ್ರಹಿಸುವ ಕುರಿತು ಮಾತುಕತೆ ನಡೆಸಲಿದ್ದಾರೆ.

ನಂತರ ಅದೇ ದಿನ ಕ್ವಾಡ್ ನಾಯಕರ ಶೃಂಗಸಭೆಯಿದ್ದು ಅದಲ್ಲಿ ಪ್ರಧಾನಿ ಮೋದಿ, ಆಸ್ಟ್ರೇಲಿಯಾ ಅಧ್ಯಕ್ಷ ಸ್ಕಾಟ್ಟ್ ಮೊರ್ರಿಸನ್ ಮತ್ತು ಜಪಾನ್ ಪ್ರಧಾನಿ ಯೊಶಿಹಿಡೆ ಸುಗ ಅವರು ಭಾಗವಹಿಸಲಿದ್ದಾರೆ. ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ದೇಶಗಳ ಸಹಭಾಗಿತ್ವ ಕ್ವಾಡ್ ಆಗಿದ್ದು, ಇಂಡೊ-ಫೆಸಿಫಿಕ್ ಪ್ರದೇಶಗಳ ಮುಕ್ತ ಮತ್ತು ಆಂತರಿಕ ಭದ್ರತೆ, ಸಹಕಾರ, ಬೆಳವಣಿಗೆಗಳಿಗೆ ಸಮಾನ ಆಸಕ್ತಿಯನ್ನು ಬಯಸುವ ದೇಶಗಳಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com