ದೇಶದ ಕನಿಷ್ಠ ಶೇ.66 ರಷ್ಟು ವಯಸ್ಕರಿಗೆ ಕೋವಿಡ್ ಮೊದಲ ಡೋಸ್ ಲಸಿಕೆ, ಶೇ. 23 ರಷ್ಟು ಜನ ಎರಡೂ ಡೋಸ್ ಪಡೆದಿದ್ದಾರೆ: ಕೇಂದ್ರ
ದೇಶದಲ್ಲಿ ಕನಿಷ್ಠ ಶೇ. 66 ರಷ್ಟು ವಯಸ್ಕರಿಗೆ ಮೊದಲ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಮತ್ತು ಶೇ, 23 ರಷ್ಟು ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.
Published: 23rd September 2021 08:06 PM | Last Updated: 23rd September 2021 08:06 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದೇಶದಲ್ಲಿ ಕನಿಷ್ಠ ಶೇ. 66 ರಷ್ಟು ವಯಸ್ಕರಿಗೆ ಮೊದಲ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಮತ್ತು ಶೇ, 23 ರಷ್ಟು ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.
ಗ್ರಾಮೀಣ ಪ್ರದೇಶಗಳಲ್ಲಿನ ಕೇಂದ್ರಗಳಲ್ಲಿ ಶೇಕಡಾ 63.7 ರಷ್ಟು ಕೋವಿಡ್ ಲಸಿಕೆ ನೀಡಲಾಗಿದೆ ಮತ್ತು ನಗರ ಪ್ರದೇಶಗಳಲ್ಲಿ ಶೇಕಡ 35.4 ರಷ್ಟು ಲಸಿಕೆ ನೀಡಲಾಗಿದೆ ಎಂದು ಕೇಂದ್ರ ತಿಳಿಸಿದೆ.
ಇದನ್ನು ಓದಿ: ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 80.67 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ಗ್ರಾಮೀಣ ಅಥವಾ ನಗರ ಪ್ರದೇಶದ ಕೋವಿಡ್ ಲಸಿಕೆ ಕೇಂದ್ರಗಳಲ್ಲಿ ಒಟ್ಟು 68.2 ಲಕ್ಷ ಡೋಸ್(ಸರಿಸುಮಾರು 0.95 ಶೇಕಡಾ) ಲಸಿಕೆ ನೀಡಿದ ಬಗ್ಗೆ ಯಾವುದೇ ಟ್ಯಾಗ್ ಮಾಡಲಾಗಿಲ್ಲ ಎಂದು ಅವರು ಆರೋಗ್ಯ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.
ಕೋವಿಡ್ ಲಸಿಕೆಯನ್ನು ಅಂಗವಿಕಲರಿಗೆ ಮತ್ತು ಇತರೆ ಅಸಹಾಯಕರಿಗೆ ಮನೆಯಲ್ಲಿಯೇ ನೀಡಲಾಗುವುದು ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಭಾರತದಲ್ಲಿ ಲಸಿಕೆ ಹಾಕಿದವರಿಗೆ 10 ದಿನಗಳ ಕ್ಯಾರೆಂಟೈನ್‌ನ ವಿವಾದಿತ ಬ್ರಿಟನ್ ನಿಯಮದ ಕುರಿತು ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ಈ ಪ್ರೋಟೋಕಾಲ್ ಅನ್ನು ಭಾರತ 'ತಾರತಮ್ಯ' ನೀತಿ ಎಂದು ಕರೆದಿದೆ. ಎರಡೂ ದೇಶಗಳು ಈ ವಿಷಯದ ಬಗ್ಗೆ ಮಾತುಕತೆ ನಡೆಸುತ್ತಿವೆ ಎಂದು ಹೇಳಿದ್ದಾರೆ.