ಪಶ್ಚಿಮ ಬಂಗಾಳ: ರಸ್ತೆ ಬದಿ ಹಳ್ಳಕ್ಕೆ ಬಿದ್ದ ಬಸ್​​, 6 ಮಂದಿ ವಲಸೆ ಕಾರ್ಮಿಕರ ದಾರುಣ ಸಾವು

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ್ ಜಿಲ್ಲೆಯ ರಾಯ್​ಗಂಜ್‌ನಲ್ಲಿ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್​​ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದ್ದು, ಪರಿಣಾಮ 6 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಯ್​ಗಂಜ್​: ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ್ ಜಿಲ್ಲೆಯ ರಾಯ್​ಗಂಜ್‌ನಲ್ಲಿ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್​​ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದ್ದು, ಪರಿಣಾಮ 6 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. 

ಕಳೆದ ರಾತ್ರಿ 10 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಪಶ್ಚಿಮ ಬಂಗಾಳ ಹಾಗೂ ಜಾರ್ಖಾಂಡ್ ರಾಜ್ಯದ ವಿವಿಧ ಜಿಲ್ಲೆಗಳಿಂದ 20 ಮಂದಿ ವಲಸೆ ಕಾರ್ಮಿಕರನ್ನು ಹೊತ್ತ ಖಾಸಗಿ ಬಸ್ ವೊಂದು ಉತ್ತರಪ್ರದೇಶದ ಲಖನೌಗೆ ತೆರಳುತ್ತಿತ್ತು. 

ರಾಯ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ರುಪಾಹರ್'ನ ರಾಷ್ಟ್ರೀಯ ಹೆದ್ದಾರಿ-34ರಲ್ಲಿ ಬಸ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ ಎಂದು ತಿಳಿದುಬಂದಿದೆ. 

ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ, ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, 6 ಮಂದಿ ಶವಗಳನ್ನು ಹೊರಗೆ ತೆಗೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ರಾಯ್ಗಂಜ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಲಾಕ್ಡೌನ್ ಹಿನ್ನೆಲೆಯಲ್ಲಿ ಮನೆಗಳಿಗೆ ವಾಪಸ್ಸಾಗಿದ್ದ ಕಾರ್ಮಿಕರು ಮರಳಿ ಕೆಲಸಗಳಿಗೆ ತೆರಳಲು ಬಸ್ ನಲ್ಲಿ ಸಂಚರಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com