ಪೆಗಾಸಸ್​ ಗೂಢಚರ್ಯೆ ಪ್ರಕರಣ: ಸ್ವತಂತ್ರ ತನಿಖೆ ಅರ್ಜಿಗಳ ಕುರಿತು ಮುಂದಿನ ವಾರ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ

ಪೆಗಾಸಸ್​ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ವಹಿಸುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಮುಂದಿನವಾರ ಮಧ್ಯಂತರ ಆದೇಶ ಹೊರಡಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಪೆಗಾಸಸ್​ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ವಹಿಸುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಮುಂದಿನವಾರ ಮಧ್ಯಂತರ ಆದೇಶ ಹೊರಡಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. 

ಪೆಗಾಸಸ್ ಗೂಢಚರ್ಯೆ ಪ್ರಕರಣ ಸಂಬಂಧ ತನಿಖೆಗೆ ಕೋರಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಿರುವ ಮುಖ್ಯ ನಾಯಮೂರ್ತಿ ಎನ್​.ವಿ ರಮಣ ಅವರಿದ್ದ ಪೀಠ, ಮುಂದಿನ ವಾರ ಮಧ್ಯಂತರ ಆದೇಶ ಹೊರಡಿಸುವುದಾಗಿ ತಿಳಿಸಿದೆ. 

ಈ ಪ್ರಕರಣಕ್ಕೆ ಸಂಬಂಧಿಸಿದ ಆದೇಶವನ್ನು ಈ ವಾರಕ್ಕೂ ಮುಂಚೆ ನೀಡಲು ಬಯಸಿದ್ದೇವೆ. ಕೆಲವು ತಜ್ಞ ಸದಸ್ಯರನ್ನು ಸಮಿತಿಗೆ ಪರಿಗಣಿಸುವ ಕುರಿತು ಯೋಚಿಸುತ್ತಿದ್ದೇವೆ. ಕೆಲವರು ವೈಯಕ್ತಿಕ ಕಾರಣಗಳಿಂದಾಗಿ ಸಮಿತಿಯ ಭಾಗವಾಗಲು ನಿರಾಕರಿಸಿದ್ದರಿಂದ ಇದು ವಿಳಂಬವಾಗುತ್ತಿದೆ. ಮುಂದಿನ ವಾರ ಪೆಗಾಸಸ್ ಕುರಿತ ಆದೇಶ ಹೊರಡಿಸಲಿದ್ದೇವೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. 

ಇಸ್ರೇಲ್‌ ಮೂಲದ ಸ್ಪೈವೇರ್‌ ಪೆಗಾಸಸ್‌ ಕುರಿತಾದಂತೆ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಮೇಲ್ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಆಲಿಸುತ್ತಿದೆ. ದಿ ವೈರ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳು ಮತ್ತು ಅಂತಾರಾಷ್ಟ್ರೀಯ ಒಕ್ಕೂಟಗಳು ಸೇರಿಕೊಂಡು ಪೆಗಾಸಸ್‌ ಕುರಿತಾದ ತನಿಖಾ ವರದಿಯನ್ನು ರಚಿಸಿತ್ತು.

ದಿ ವೈರ್ ವರದಿಗಳು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ತೃಣಮೂಲ ಸಂಸದ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಸೇರಿದಂತೆ 300 ಕ್ಕೂ ಹೆಚ್ಚು ವಿರೋಧ ಪಕ್ಷದ ನಾಯಕರು, ಪತ್ರಕರ್ತರು ಮತ್ತು ಇತರರ ದೂರವಾಣಿ ಸಂಖ್ಯೆಗಳನ್ನು ಸಂಭಾವ್ಯ ಗುರಿಗಳ ಪಟ್ಟಿಯಲ್ಲಿದೆ ಎಂದು ಉಲ್ಲೇಖಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com