ಶಾಕಿಂಗ್ ನ್ಯೂಸ್: ಮಹಾರಾಷ್ಟ್ರದ ಥಾಣೆ ಬಳಿ ಅಪ್ರಾಪ್ತೆ ಮೇಲೆ 29 ಕಾಮುಕರಿಂದ ಗ್ಯಾಂಗ್ ರೇಪ್; 21 ಆರೋಪಿಗಳ ಬಂಧನ
ಆಘಾತಕಾರಿ ಘಟನೆಯೊಂದರಲ್ಲಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಡೊಂಬಿವ್ಲಿಯಲ್ಲಿ ನಡೆದ ಅಪ್ರಾಪ್ತೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 21 ಆರೋಪಿಗಳನ್ನು ಬಂಧಿಸಲಾಗಿದೆ.
Published: 23rd September 2021 05:57 PM | Last Updated: 23rd September 2021 06:57 PM | A+A A-

ಸಾಂದರ್ಭಿಕ ಚಿತ್ರ
ಥಾಣೆ: ಆಘಾತಕಾರಿ ಘಟನೆಯೊಂದರಲ್ಲಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಡೊಂಬಿವ್ಲಿಯಲ್ಲಿ ನಡೆದ ಅಪ್ರಾಪ್ತೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 21 ಆರೋಪಿಗಳನ್ನು ಬಂಧಿಸಲಾಗಿದೆ.
ಅಪ್ರಾಪ್ತೆ ನೀಡಿದ ದೂರಿನ ಆಧಾರದ ಮೇಲೆ 29 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಥಾಣೆ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳು ಅಪ್ರಾಪ್ತೆಯ ಸ್ನೇಹಿತರಾಗಿದ್ದಾರೆ.
ಈವರೆಗೂ 21 ಆರೋಪಿಗಳನ್ನು ಬಂಧಿಸಲಾಗಿದೆ. ಇತರ ಇಬ್ಬರು ಅಪ್ರಾಪ್ತ ವಯಸ್ಸಿನ ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರ ಬಂಧನಕ್ಕಾಗಿ ಹುಡುಕಾಟ ನಡೆಸಲಾಗಿದೆ. 29 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) 376 (ಎನ್ ) 376 (3), 376 (ಡಿ) ಎ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಥಾಣೆ ಪೊಲೀಸರು ಹೇಳಿದ್ದಾರೆ.
ಅಪ್ರಾಪ್ತ ಬಾಲಕಿ ಕಾಲ್ವಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದುಷ್ಕರ್ಮಿಗಳಿಗೆ ತೀವ್ರ ಶಿಕ್ಷೆಯಾಗಬೇಕೆಂದು ವಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಒಕ್ಕಾಯಿಸಿದ್ದಾರೆ.