ಮಹಾಂತ ನರೇಂದ್ರ ಗಿರಿ ಸಾವಿನ ಕುರಿತು ಸಿಬಿಐ ತನಿಖೆಗೆ ಕೇಂದ್ರ ಒಪ್ಪಿಗೆ

ಅಲಹಾಬಾದ್‌ನ ಅಖಿಲ ಭಾರತೀಯ ಅಖಾರ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಅವರ ಸಾವಿನ ಕುರಿತು ಸಿಬಿಐ ತನಿಖೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಮಹಾಂತ ನರೇಂದ್ರ ಗಿರಿ
ಮಹಾಂತ ನರೇಂದ್ರ ಗಿರಿ

ನವದೆಹಲಿ: ಅಲಹಾಬಾದ್‌ನ ಅಖಿಲ ಭಾರತೀಯ ಅಖಾರ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಅವರ ಸಾವಿನ ಕುರಿತು ಸಿಬಿಐ ತನಿಖೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಭಾರತದ ಅತಿದೊಡ್ಡ ಸಾಧುಗಳ ಸಂಘಟನೆಯ ಅಧ್ಯಕ್ಷರಾಗಿದ್ದ ಮಹಾಂತ ನರೇಂದ್ರ ಗಿರಿ ಅವರು ಪ್ರಯಾಗ್ ರಾಜ್ ನ ಭಾಗಂಬರಿ ಮಠದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸೆ.20 ರಂದು ಪತ್ತೆಯಾಗಿದ್ದರು. ಅವರ ಮೃತ ದೇಹ ಪತ್ತೆಯಾದ ಪ್ರದೇಶದಲ್ಲಿ 7 ಪುಟಗಳ ಡೆತ್ ನೋಟ್ ಸಿಕ್ಕಿದೆ.

ಮಹಾಂತ ನರೇಂದ್ರ ಗಿರಿ ಅವರ ಸಾವಿನ ಕುರಿತು ಸಿಬಿಐ ತನಿಖೆಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ(ಡಿಒಪಿಟಿ) ಇಂದು ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

"ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸೂಚನೆಗಳ ಮೇರೆಗೆ, ಅಖಾರ ಪರಿಷತ್ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ(ಕೇಂದ್ರೀಯ ತನಿಖಾ ದಳ) ತನಿಖೆಗೆ ಶಿಫಾರಸು ಮಾಡಲಾಗಿದೆ" ಎಂದು ಉತ್ತರ ಪ್ರದೇಶದ ಗೃಹ ಇಲಾಖೆ ಬಧವಾರ ತಿಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com