ಭವಾನಿಪುರ ಉಪಚುನಾವಣೆ: 'ಬೇರೆ ಕಡೆ ಸಾಂವಿಧಾನಿಕ ತುರ್ತು ಇಲ್ಲವೇ?'- ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಪ್ರಶ್ನೆ

ಪ್ರಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸುತ್ತಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಆದ್ಯತೆ ನೀಡುವ ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ...
ಕಲ್ಕತ್ತಾ ಹೈಕೋರ್ಟ್
ಕಲ್ಕತ್ತಾ ಹೈಕೋರ್ಟ್

ಕೋಲ್ಕತ್ತಾ: ಪ್ರಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸುತ್ತಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಆದ್ಯತೆ ನೀಡುವ ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಗೆ ಸಂಬಂಧಿಸಿದಂತೆ ಆಯೋಗದ ಅಫಿಡವಿಟ್ ದಾಖಲಿಸಿಕೊಳ್ಳಲು ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಪಿಐಎಲ್ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ರಾಜರ್ಷಿ ಭಾರದ್ವಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಸರಿಯಾಗಿ ಅಫಿಡವಿಟ್ ಸಲ್ಲಿಸಿದ ಚುನಾವಣಾ ಆಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು ಮತ್ತು ಉಪ ಚುನಾವಣೆ ಬಾಕಿ ಇರುವ ಇತರೆ ಕ್ಷೇತ್ರಗಳಲ್ಲಿ ಸಾಂವಿಧಾನಿಕ ತುರ್ತುಸ್ಥಿತಿ ಇಲ್ಲವೇ? ಪ್ರಶ್ನಿಸಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ತುರ್ತು ಮತ್ತು ವಿಶೇಷ ವಿನಂತಿಯ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸೆಪ್ಟೆಂಬರ್ 6 ರಂದು, ಭವಾನಿಪುರ ಕ್ಷೇತ್ರಕ್ಕೆ ಸೆಪ್ಟೆಂಬರ್ 30 ರಂದು ಉಪಚುನಾವಣೆ ನಡೆಸುವ ಅಧಿಸೂಚನೆಯನ್ನು ಹೊರಡಿಸಿತ್ತು.

ಭವಾನಿಪುರದಲ್ಲಿ ಉಪಚುನಾವಣೆಯನ್ನು ತುರ್ತಾಗಿ ನಡೆಸದಿದ್ದರೆ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗುತ್ತದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು.

"ಅಫಿಡವಿಟ್‌ನಲ್ಲಿ ಏನನ್ನೂ ಉಲ್ಲೇಖಿಸಲಾಗಿಲ್ಲ. ಯಾರು ಅದನ್ನು ಸಲ್ಲಿಸಿದ್ದಾರೆ? ನಾವು ಇದನ್ನು ದಾಖಲೆಯಲ್ಲಿ ತೆಗೆದುಕೊಳ್ಳಲು ಸಾಧ್ಯವಿಲ್ಲ" ಎಂದು ಬಿಂದಾಲ್ ಅವರು ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com