ಪುಣೆ: ಮಹಾರಾಷ್ಟ್ರ ಹಿರಿಯ ಕಾಂಗ್ರೆಸ್ ನಾಯಕ ಶರದ್ ರಾನ್ಪಿಸ್ ನಿಧನ

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಹಾರಾಷ್ಟ್ರ ವಿಧಾನ ಪರಿಷತ್ ನಾಯಕ ಶರದ್ ರಾನ್ಪೀಸ್ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶರದ್ ರಾಸ್ಪಿನ್
ಶರದ್ ರಾಸ್ಪಿನ್

ಪುಣೆ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಹಾರಾಷ್ಟ್ರ ವಿಧಾನ ಪರಿಷತ್ ನಾಯಕ ಶರದ್ ರಾನ್ಪೀಸ್ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೊಳಗಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಧ್ಯಯನ ಶೀಲ ವ್ಯಕ್ತಿಯಾಗಿದ್ದ ರಾಸ್ಪಿನ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ.

ಪುಣೆ ಮುನ್ಸಿಪಲ್ ಕಾರ್ಪೋರೇಷನ್ ನಲ್ಲಿ ಕಾರ್ಪೋರೇಟರ್ ಆಗಿ ಆಯ್ಕೆಯಾಗಿದ್ದ ಶರದ್ ರಾಸ್ಪಿನ್ ಪಾರ್ವತಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಗೆಲುವು ಕಂಡಿದ್ದರು. ಕಾಂಗ್ರೆಸ್ ನ ಎಂಎಲ್ ಸಿಯಾಗಿದ್ದ ಅವರು ಪರಿಷತ್ ನ ವಿರೋಧ ಪಕ್ಷದ ನಾಯಕರಾಗಿದ್ದರು.

ರಾನ್ಪೀಸ್ ಸಾವಿಗೆ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ರಾಜ್ಯವು ಮೃದು ಸ್ವಭಾವದ ಮತ್ತು ಮುತ್ಸದ್ದಿ ಶಾಸಕರನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com