ಶೀಘ್ರದಲ್ಲೇ ಹೊಸ ಸಹಕಾರಿ ನೀತಿ ಘೋಷಣೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಕೇಂದ್ರ ಸರ್ಕಾರ ಶೀಘ್ರದಲ್ಲೇ ಹೊಸ ಸಹಕಾರಿ ನೀತಿಯನ್ನು ಹೊರತರಲಿದೆ ಮತ್ತು ಸಹಕಾರಿ ಚಳುವಳಿಯನ್ನು ಬಲಪಡಿಸಲು ರಾಜ್ಯಗಳ ಜೊತೆ ಕೆಲಸ ಮಾಡಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ...
ಗೃಹ ಸಚಿವ ಅಮಿತ್ ಶಾ
ಗೃಹ ಸಚಿವ ಅಮಿತ್ ಶಾ

ನವದೆಹಲಿ: ಕೇಂದ್ರ ಸರ್ಕಾರ ಶೀಘ್ರದಲ್ಲೇ ಹೊಸ ಸಹಕಾರಿ ನೀತಿಯನ್ನು ಹೊರತರಲಿದೆ ಮತ್ತು ಸಹಕಾರಿ ಚಳುವಳಿಯನ್ನು ಬಲಪಡಿಸಲು ರಾಜ್ಯಗಳ ಜೊತೆ ಕೆಲಸ ಮಾಡಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.

ಮುಂದಿನ ಐದು ವರ್ಷಗಳಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ಪಿಎಸಿ)ಗಳ ಸಂಖ್ಯೆಯನ್ನು 3 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ್ದಾರೆ. ಪ್ರಸ್ತುತ, ಸುಮಾರು 65,000 ಪಿಎಸಿಗಳಿವೆ.

ರಾಷ್ಟ್ರೀಯ ಸಹಕಾರಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಈ ವರ್ಷದ ಜುಲೈನಲ್ಲಿ ಸಹಕಾರ ಸಚಿವಾಲಯವನ್ನು ರಚಿಸಲಾಯಿತು. ಸಹಕಾರಿ ವಲಯ ರಾಜ್ಯದ ವಿಷಯವಾಗಿರುವುದರಿಂದ ಕೇಂದ್ರ ಸರ್ಕಾರ ಏಕೆ ಈ ಹೊಸ ಸಚಿವಾಲಯವನ್ನು ರಚಿಸಿತು ಎಂದು ಕೆಲವರು ಆಶ್ಚರ್ಯ ಪಡುತ್ತಾರೆ. ಆದರೆ ಅದಕ್ಕೆ ಕಾನೂನಾತ್ಮಕ ಪ್ರತಿಕ್ರಿಯೆ ನೀಡುತ್ತೇವೆ. ಈ ಬಗ್ಗೆ ನಾನು ಹೆಚ್ಚು ವಾದ ಮಾಡಲು ಬಯಸುವುದಿಲ್ಲ ಎಂದರು.

ಈ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಗಳೊಂದಿಗೆ ಸಹಕರಿಸುತ್ತದೆ ಮತ್ತು "ಯಾವುದೇ ಘರ್ಷಣೆ ಇರುವುದಿಲ್ಲ" ಎಂದು ಅಮಿತ್ ಶಾ ಒತ್ತಿ ಹೇಳಿದರು.

ಈ ಸಮಾವೇಶದಲ್ಲಿ ವಿವಿಧ ಸಹಕಾರಿ ಸಂಘಗಳ 2,100 ಪ್ರತಿನಿಧಿಗಳು ಮತ್ತು ಸುಮಾರು 6 ಕೋಟಿ ಜನ ಆನ್‌ಲೈನ್ ಮೂಲಕ ಭಾಗವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com