ಪ್ರಿನ್ಸ್ ರಾಜ್
ಪ್ರಿನ್ಸ್ ರಾಜ್

ಅತ್ಯಾಚಾರ ಪ್ರಕರಣ: ಎಲ್‌ಜೆಪಿ ಸಂಸದ ಪ್ರಿನ್ಸ್ ರಾಜ್‌ಗೆ ನಿರೀಕ್ಷಣಾ ಜಾಮೀನು

ಅತ್ಯಾಚಾರ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದ್ದ ಲೋಕ ಜನಶಕ್ತಿ ಪಕ್ಷದ ಸಂಸದ ಪ್ರಿನ್ಸ್ ರಾಜ್ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ನೀಡಿದೆ.

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದ್ದ ಲೋಕ ಜನಶಕ್ತಿ ಪಕ್ಷದ ಸಂಸದ ಪ್ರಿನ್ಸ್ ರಾಜ್ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ನೀಡಿದೆ.

ಪ್ರಿನ್ಸ್ ರಾಜ್ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು, ಅತ್ಯಾಚಾರ ಪ್ರಕರಣದ ಆರೋಪಿ ಸಂಸದನಿಗೆ 1 ಲಕ್ಷ ರೂಪಾಯಿ ಬಾಂಡ್ ಮತ್ತು ಒಬ್ಬರ ಸ್ಯುರಿಟಿ ಮೇಲೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.

ಬಿಹಾರದ ಸಮಸ್ತಿಪುರದ ಸಂಸದರಾಗಿರುವ ಪ್ರಿನ್ಸ್ ರಾಜ್ ಅವರು, ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಸಂಬಂಧಿ ಮತ್ತು ಚಿರಾಗ್ ಪಾಸ್ವಾನ್ ಅವರ ಸೋದರ ಸಂಬಂಧಿಯಾಗಿದ್ದಾರೆ.

ಅರ್ಜಿಯಲ್ಲಿ, ರಾಜ್ ಪರ ವಕೀಲ ನಿತೇಶ್ ರಾಣಾ, ಅಚ್ಯಾಚಾರ ಆರೋಪ ಮಾಡಿರುವ ಮಹಿಳೆ ಮತ್ತು ಆಕೆಯ ಪುರುಷ ಸ್ನೇಹಿತರು ಹಣ ವಸೂಲಿಗಾಗಿ 2020 ರಿಂದ ಸಂಸದರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

ದೆಹಲಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ದೆಹಲಿ ಪೊಲೀಸರು ಸೆಪ್ಟೆಂಬರ್ 9 ರಂದು ಪ್ರಿನ್ಸ್ ರಾಜ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.

ತಾನು ಎಲ್ ಜೆಪಿ ಕಾರ್ಯಕರ್ತೆ ಎಂದು ಹೇಳಿಕೊಂಡಿರುವ ಮಹಿಳೆ, ತಾನು ಪ್ರಜ್ಞಾಹೀನಳಾಗಿದ್ದಾಗ ಸಂಸದ ಪ್ರಿನ್ಸ್ ರಾಜ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಳೆ ಎಂದು ಆರೋಪಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com