ಸೆಪ್ಟೆಂಬರ್ 28ಕ್ಕೆ ಕನ್ಹಯ್ಯ ಕುಮಾರ್, ಜಿಗ್ನೇಶ್ ಮೆವಾನಿ ಕಾಂಗ್ರೆಸ್ ಸೇರ್ಪಡೆ?

ಜವಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ಶಾಸಕ ಜಿಗ್ನೇಶ್ ಮೆವಾನಿ ಇದೇ 28 ರಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಕನ್ಹಯ್ಯ ಕುಮಾರ್, ಜಿಗ್ನೇಶ್ ಮೆವಾನಿ
ಕನ್ಹಯ್ಯ ಕುಮಾರ್, ಜಿಗ್ನೇಶ್ ಮೆವಾನಿ

ನವದೆಹಲಿ: ಜವಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ಶಾಸಕ ಜಿಗ್ನೇಶ್ ಮೆವಾನಿ ಇದೇ 28 ರಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ಯುವ ಮುಖಂಡರ ತಂಡವೊಂದನ್ನು ಅಭಿವೃದ್ಧಿಪಡಿಸುತ್ತಿದ್ದು, ಕನ್ಹಯ್ಯ ಕುಮಾರ್ ಮತ್ತು ಮೇವಾನಿ ಈ ತಂಡದಲ್ಲಿ ಮಹತ್ವದ ಪಾತ್ರ ವಹಿಸುವ ಸಾಧ್ಯತೆಯಿದೆ. ಬಿಹಾರದಲ್ಲಿ ಕನ್ಹಯ್ಯ ಕುಮಾರ್ ಪಕ್ಷವನ್ನು ಪ್ರತಿನಿಧಿಸುವ ಯುವ ಮುಖಂಡರಾಗಿದ್ದು, ರಾಷ್ಟ್ರಮಟ್ಟದಲ್ಲೂ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಕನ್ಹಯ್ಯ ಕುಮಾರ್ ಈ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಬಿಜೆಪಿ ವಿರುದ್ಧ ರಾಷ್ಟ್ರೀಯ ಆಂದೋಲನ ಕಾರ್ಯತಂತ್ರವನ್ನು ಪಕ್ಷ ರೂಪಿಸುತ್ತಿದ್ದು, ಈ ಯುವ ಮುಖಂಡರನ್ನೊಳಗೊಂಡ ತಂಡವೊಂದನ್ನು ರಾಹುಲ್ ಗಾಂಧಿ ರಚಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

ಕನ್ಹಯ್ಯ ಕುಮಾರ್ ಪ್ರಸ್ತುತ ಸಿಪಿಐ ಮುಖಂಡರಾಗಿದ್ದರೆ, ಮೇವಾನಿ ಗುಜರಾತಿನ ವಡ್ಗಮ್ ಕ್ಷೇತ್ರದ ಪಕ್ಷೇತರ ಶಾಸಕರಾಗಿದ್ದಾರೆ. 2017ರಲ್ಲಿ ಗುಜರಾತ್ ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮೇವಾನಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com