ಮುಂಬೈ: ಬೈಕುಲಾ ಮಹಿಳಾ ಜೈಲಿನ 39 ಕೈದಿಗಳಿಗೆ ಕೋವಿಡ್-19 ಪಾಸಿಟಿವ್ 

ಬೈಕುಲಾ ಮಹಿಳಾ ಜೈಲಿನಲ್ಲಿರುವ 39 ಕೈದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಬೃಹನ್ ಮುಂಬೈ ಮಹಾನಗರ ಪಾಲಿಕೆಯಿಂದ ಈ ಜೈಲಿನ ಕೈದಿಗಳು, ಸಿಬ್ಬಂದಿ ಸೇರಿದಂತೆ ಒಟ್ಟು 120 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ 39 ಕೈದಿಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಬೈಕುಲಾ ಮಹಿಳಾ ಜೈಲು
ಬೈಕುಲಾ ಮಹಿಳಾ ಜೈಲು

ಮುಂಬೈ: ಇಲ್ಲಿನ ಬೈಕುಲಾ ಮಹಿಳಾ ಜೈಲಿನಲ್ಲಿರುವ 39 ಕೈದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಬೃಹನ್ ಮುಂಬೈ ಮಹಾನಗರ ಪಾಲಿಕೆಯಿಂದ ಈ ಜೈಲಿನ ಕೈದಿಗಳು, ಸಿಬ್ಬಂದಿ ಸೇರಿದಂತೆ ಒಟ್ಟು 120 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ 39 ಕೈದಿಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

10 ದಿನಗಳ ಅವಧಿಯಲ್ಲಿ ಆರು ಮಕ್ಕಳು ಸೇರಿದಂತೆ 39 ಮಹಿಳಾ ಕೈದಿಗಳಿಗೆ ಕೋವಿಡ್-19 ಸಾಂಕ್ರಾಮಿಕ ತಗುಲಿರುವುದು ಪತ್ತೆಯಾಗಿದೆ. ಈ ಸೋಂಕಿತರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದ್ದು, ಜೈಲಿನಿಂದ ಬಿಎಂಸಿ ಶಾಲೆಯ ಐಸೋಲೇಷನ್ ಕ್ಯಾಂಪ್ ಗೆ ಸ್ಥಳಾಂತರಿಸಲಾಗಿದೆ ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ. 

ಗರ್ಭಿಣಿಯೊಬ್ಬರನ್ನು ಹತ್ತಿರದ ಮುನ್ಸಿಪಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಪರಿಸ್ಥಿತಿ ಸ್ಥಿರವಾಗಿದೆ ಆದರೆ, ಮುಂಜಾಗ್ರತಾ ಕ್ರಮವಾಗಿ ವೈದ್ಯರು ನಿಗಾ ವಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com