ಭವಾನಿಪುರ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ಹೊರಗಿನ ಪ್ರಶಾಂತ್ ಕಿಶೋರ್ ಹೆಸರು ಸೇರ್ಪಡೆ- ಬಿಜೆಪಿ

ಪಶ್ಚಿಮ ಬಂಗಾಳದಲ್ಲಿ ಮಹತ್ವದ ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಮುಂದಿರುವಂತೆಯೇ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲಿ ಟಿಎಂಸಿ ಚುನಾವಣಾ ಸಲಹೆಗಾರ ಪ್ರಶಾಂತ್ ಕಿಶೋರ್ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ ಎಂದು ಬಿಜೆಪಿ ಹೇಳಿದೆ. 
ಪ್ರಶಾಂತ್ ಕಿಶೋರ್
ಪ್ರಶಾಂತ್ ಕಿಶೋರ್
Updated on

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮಹತ್ವದ ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಮುಂದಿರುವಂತೆಯೇ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲಿ ಟಿಎಂಸಿ ಚುನಾವಣಾ ಸಲಹೆಗಾರ ಪ್ರಶಾಂತ್ ಕಿಶೋರ್ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ ಎಂದು ಬಿಜೆಪಿ ಹೇಳಿದೆ. 

ಪ್ರಶಾಂತ್ ಕಿಶೋರ್ ಈ ಹಿಂದೆ ಬಿಹಾರದ ಸಸಾರಾಮ್ ಜಿಲ್ಲೆಯ ತಮ್ಮ ಸ್ವಗ್ರಾಮದಲ್ಲಿ ಮತದಾರರಾಗಿದ್ದರು. ಬ್ಯಾನರ್ಜಿ ಮತ್ತು ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್‌ಗೆ ಸಹಾಯ ಮಾಡಿದ  ಕಿಶೋರ್ ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಅಧಿಕಾರವನ್ನು ಉಳಿಸಿಕೊಂಡಿದ್ದಾರೆ, ಇದು ಅವರನ್ನು ಕೊಲ್ಕತ್ತಾ ದಕ್ಷಿಣ ಲೋಕಸಭಾ ಕ್ಷೇತ್ರದ ಮತದಾರರನ್ನಾಗಿಸಿದೆ ಎಂದು ತಿಳಿದುಬಂದಿದೆ. ಏಪ್ರಿಲ್ ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲೂ ಅವರು ಮತ ಚಲಾಯಿಸಿದ್ದಾರೆ ಎನ್ನಲಾಗಿದೆ. 

ಚುನಾವಣಾ ಆಯೋಗದ ವೆಬ್ ಸೈಟ್ ಮಾಹಿತಿ ಪ್ರಕಾರ ಭವಾನಿಪುರದಲ್ಲಿ ಉಪ ಚುನಾವಣೆ ಘೋಷಣೆಯಾಗುವುದಕ್ಕೂ ಮುಂಚಿತವಾಗಿಯೇ ಜನವರಿ- ಏಪ್ರಿಲ್ ಅವಧಿಯಲ್ಲೇ ಪ್ರಶಾಂತ್ ಕಿಶೋರ್ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ ಎನ್ನಲಾಗಿದೆ.

ಪ್ರಶಾಂತ್ ಕಿಶೋರ್ ಅವರನ್ನು ಭವಾನಿಪುರ ಮತದಾರರ ಪಟ್ಟಿಯಲ್ಲಿ ದಾಖಲಿಸಿದ್ದಕ್ಕೆ ಹೊರಗಿನವರು ಎಂದು ಬಿಜೆಪಿ ವ್ಯಂಗ್ಯವಾಡಿದೆ. ಅಂತಿಮವಾಗಿ ಪ್ರಶಾಂತ್ ಕಿಶೋರ್ ಭವಾನಿಪುರದ ಮತದಾರರಾಗಿದ್ದಾರೆ. ಬಂಗಾಳದ ಮಗಳಿಗೆ ಈಗ ಹೊರಗಿನ ಮತದಾರರ ಅಗತ್ಯವಿದೆಯೇ? ರಾಜ್ಯದ ಜನ ತಿಳಿಯಲು ಬಯಸಿದ್ದಾರೆ ಎಂದು ಬಿಜೆಪಿಯ ಮಾಧ್ಯಮ ಘಟಕದ ಉಸ್ತುವಾರಿ ಸಪ್ತರ್ಷಿ ಚೌಧರಿ ಟ್ವೀಟ್ ಮಾಡಿದ್ದಾರೆ. ಟ್ವಿಟ್ ನಲ್ಲಿ ಮಮತಾ ಬ್ಯಾನರ್ಜಿ , ಟಿಎಂಸಿ ಮತ್ತು ಟಿಎಂಸಿ ವಕ್ತಾರ ಕುನಾಲ್ ಘೋಷ್ ಅವರನ್ನು ಟ್ಯಾಗ್ ಮಾಡಲಾಗಿದೆ. 

ಟಿಎಂಸಿಯ ಚುನಾವಣಾ ಸಲಹೆಗಾರರಾಗಿರುವ ಕಿಶೋರ್, ಭವಾನಿಪುರ ಚುನಾವಣೆ ಘೋಷಣೆಯಾದ ಬಳಿಕ ಸಾರ್ವಜನಿಕವಾಗಿ ಪಕ್ಷದ ಪ್ರಚಾರಗಳಲ್ಲಿ ಕಾಣಿಸಿಕೊಂಡಿಲ್ಲ. ಆದರೆ, ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಜೊತೆಗೆ ಇತ್ತೀಚಿಗೆ ದೆಹಲಿಯಲ್ಲಿ ಸಭೆ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com