ಕಾಶ್ಮೀರ: ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ನಾಲ್ವರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದ್ದು, ಘಟನೆಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ...
ಭಾರತೀಯ ಸೇನೆ
ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದ್ದು, ಘಟನೆಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಅನುಮಾನಾಸ್ಪದ ಚಲನವಲನ ಗಮನಿಸಿದ ನಂತರ ಉತ್ತರ ಕಾಶ್ಮೀರದ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನೆ ಒಳನುಸುಳುವಿಕೆ ತಡೆ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. "ಉರಿಯಲ್ಲಿನ ಎಲ್‌ಒಸಿಯಾದ್ಯಂತ ನುಸುಳುಕೋರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನುಸುಳುಕೋರರು ಭಾರತೀಯ ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಗುಂಡಿನ ಕಾಳಗಕ್ಕೆ ಕಾರಣವಾಯಿತು ಎಂದು ಅವರು ಹೇಳಿದರು.

ಕಳೆದ ಎರಡು ದಿನಗಳಿಂದ ಉಭಯ ದೇಶಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಒಬ್ಬ ನುಸುಳುಕೋರನನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಆದರೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com