ಸೆಂಟ್ರಲ್ ವಿಸ್ಟಾ ಯೋಜನೆಯ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ಅನಿರೀಕ್ಷಿತ ಭೇಟಿ, ಪರಿಶೀಲನೆ; ವಿಡಿಯೋ
ಪ್ರಧಾನಿ ನರೇಂದ್ರ ಮೋದಿ ಅಮೆರಿಕದಿಂದ ದೆಹಲಿಗೆ ವಾಪಾಸ್ಸಾಗುತ್ತಿದ್ತಂತೆ ಹೊಸ ಸಂಸತ್ ಭವನದ ಕಟ್ಟಡ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Published: 27th September 2021 11:29 AM | Last Updated: 27th September 2021 01:01 PM | A+A A-

ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಮೆರಿಕದಿಂದ ದೆಹಲಿಗೆ ವಾಪಾಸ್ಸಾಗುತ್ತಿದ್ತಂತೆ ಹೊಸ ಸಂಸತ್ ಭವನದ ಕಟ್ಟಡ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾನುವಾರ ರಾತ್ರಿ 8:45 ರ ಸುಮಾರಿಗೆ ಹೊಸ ಸಂಸತ್ ಕಟ್ಟಡದ ನಿರ್ಮಾಣ ಸ್ಥಳಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ನಿರ್ಮಾಣ ಹಂತದಲ್ಲಿರುವ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.
ಪ್ರಸ್ತಾವಿತ ಕೇಂದ್ರ ವಿಸ್ತಾ ಯೋಜನೆಯ ಸ್ಥಳದಲ್ಲಿ ಸುಮಾರು ಒಂದು ಗಂಟೆ ಕಾಲ, ನಿರ್ಮಾಣ ಕಾಮಗಾರಿಯಲ್ಲಿ ತೊಡಗಿರುವವರ ಜೊತೆಗೆ ಮಾತುಕತೆ ನಡೆಸಿದರು.
#WATCH | PM Narendra Modi visited the construction site of the new Parliament building in New Delhi last night. He spent almost an hour at the site and did a first-hand inspection of the construction status of the new Parliament building.
— ANI (@ANI) September 27, 2021
(Source: PMO) pic.twitter.com/Od7mgxgz4x
ಆದರೆ.... ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿದ್ದವರಿಗೆ ಯಾವುದೇ ಮಾಹಿತಿ ನೀಡದೆ ಪ್ರಧಾನಿ ಅಲ್ಲಿಗೆ ಭೇಟಿ ನೀಡಿದ್ದರು. ಸುಮಾರು ಒಂದು ಗಂಟೆ ಕಾಲ ಕಾಮಗಾರಿ ಪ್ರದೇಶಗಳಲ್ಲಿ ಸುತ್ತಾಡಿ ಸಂಸತ್ ಭವನ ನಿರ್ಮಾಣದ ಪ್ರಗತಿ ವಿಚಾರಿಸಿ, ಇಡೀ ಪ್ರದೇಶವನ್ನು ಸಂಪೂರ್ಣವಾಗಿ ಪರಿಶೀಲಿಸಿದರು.
ಹೊಸ ಸಂಸತ್ ಭವನ ನಿರ್ಮಾಣ ವಿಷಯದಲ್ಲಿ ಪ್ರಧಾನಿ ಮೋದಿ ಅವರು ತೋರಿಸಿದ ಆಸಕ್ತಿ ಸ್ಥಳದಲ್ಲಿದ್ದ ಸಿವಿಲ್ ಇಂಜಿನಿಯರ್ ಗಳು ಕೂಡ ಅಚ್ಚರಿಗೊಳಗಾಗಿದ್ದು, ಪ್ರಧಾನಿಗೆ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಹೊಸ ಸಂಸತ್ ಭವನದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಸೆಂಟ್ರಲ್ ವಿಸ್ತಾ ಯೋಜನೆಯ ಭಾಗವಾಗಿ ಕಟ್ಟಡ ನಿರ್ಮಿಸಲಾಗುತ್ತಿದೆ.
ಕೇಂದ್ರ ಸರ್ಕಾರದ ಅಧಿಕಾರಿಗಳ ಪ್ರಕಾರ, 2022 ರ ಚಳಿಗಾಲದ ಅಧಿವೇಶನ ಹೊಸ ಸಂಸತ್ ಭವನದಲ್ಲಿ ನಡೆಯುವ ಸಾಧ್ಯತೆಯಿದೆ. ಸುಮಾರು 64,500 ಚದರ ಮೀಟರ್ ವಿಸ್ತೀರ್ಣವನ್ನು ಈ ಭವನ ಹೊಂದಿದೆ.
ಹೊಸ ಸಂಸತ್ ಭವನ.. ಲೋಕಸಭೆಯ 888 ಸದಸ್ಯರು, ರಾಜ್ಯಸಭೆಯ 384 ಸದಸ್ಯರು ಕುಳಿತುಕೊಳ್ಳಲು ಸಾಧ್ಯವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಹೊಸ ಸಂಸತ್ ಭವನ ನಿರ್ಮಾಣದ ಅಂದಾಜು ವೆಚ್ಚ 971 ಕೋಟಿ ರೂಗಳಾಗಿದೆ.
ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದು ಇದೇ ಮೊದಲು. ಈ ಕಟ್ಟಡಕ್ಕೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಶಿಲಾನ್ಯಾಸ ಮಾಡಲಾಗಿತ್ತು. ಈವರೆಗೆ ಕೇಂದ್ರ ಸರ್ಕಾರ ಹೊಸ ಸಂಸತ್ ಭವನ ನಿರ್ಮಾಣಕ್ಕೆ 238 ಕೋಟಿ ರೂ. ಬಿಡುಗಡೆಗೊಳಿಸಿದೆ.