ಅಮರೀಂದರ್ ಸಿಂಗ್ ಬಿಜೆಪಿ ಸೇರ್ಪಡೆ?: ದೆಹಲಿ ಭೇಟಿ ವೇಳೆ ಅಮಿತ್ ಶಾ ಭೇಟಿ ಸಾಧ್ಯತೆ

ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ 'ಅನಿರೀಕ್ಷಿತವಾಗಿ' ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹದಿನೈದು ದಿನಗಳ ನಂತರ, ಕಾಂಗ್ರೆಸ್ ಅನುಭವಿ ನಾಯಕ ಅಮರೀಂದರ್ ಸಿಂಗ್ ಅವರು ಮಂಗಳವಾರ...
ಕ್ಯಾಪ್ಟನ್ ಅಮರೀಂದರ್ ಸಿಂಗ್
ಕ್ಯಾಪ್ಟನ್ ಅಮರೀಂದರ್ ಸಿಂಗ್

ಚಂಡೀಗಢ: ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ 'ಅನಿರೀಕ್ಷಿತವಾಗಿ' ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹದಿನೈದು ದಿನಗಳ ನಂತರ, ಕಾಂಗ್ರೆಸ್ ಅನುಭವಿ ನಾಯಕ ಅಮರೀಂದರ್ ಸಿಂಗ್ ಅವರು ಮಂಗಳವಾರ ಸಂಜೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಅಮರೀಂದರ್ ಸಿಂಗ್ ಅವರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದು, ಇಂದು ಸಂಜೆ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಸಹ ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಆದಾಗ್ಯೂ, ಅಮರೀಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ, ಪಂಜಾಬ್ ಮಾಜಿ ಸಿಎಂ ಬಿಜೆಪಿ ನಾಯಕರೊಂದಿಗಿನ ಭೇಟಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಆದರೆ ಅಮರೀಂದರ್ ಸಿಂಗ್ ಅವರು ತಮ್ಮ ಕೆಲವು ಸ್ನೇಹಿತರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ ಎಂದು ಹೇಳಿದ್ದಾರೆ.

ಅಮರೀಂದರ್ ಸಿಂಗ್ ಅವರ ದೆಹಲಿ ಭೇಟಿಗೆ ಸಂಬಂಧಿಸಿದಂತೆ ತುಂಬಾ ಓದಿದೆ. ಅವರು ವೈಯಕ್ತಿಕ ಭೇಟಿಗಾಗಿ ದೆಹಲಿಯಲ್ಲಿದ್ದಾರೆ. ಆ ಸಮಯದಲ್ಲಿ ಅವರು ಕೆಲವು ಸ್ನೇಹಿತರನ್ನು ಭೇಟಿ ಮಾಡುತ್ತಾರೆ ಮತ್ತು ಹೊಸ ಸಿಎಂಗಾಗಿ ಕಪುರ್ತಲಾ ಮನೆಯನ್ನು ಖಾಲಿ ಮಾಡುತ್ತಾರೆ. ಈ ಬಗ್ಗೆ ಯಾವುದೇ ಅನಗತ್ಯ ಊಹಾಪೋಹ ಬೇಡ" ಎಂದು ಮಾಜಿ ಸಿಎಂ ಮಾಧ್ಯಮ ಸಲಹೆಗಾರ ರವೀನ್ ತುಕ್ರಲ್ ಅವರು ಟ್ವೀಟ್ ಮಾಡಿದ್ದಾರೆ.

ಉದ್ದೇಶಿತ ಭೇಟಿಯು ನಿರ್ಣಾಯಕವಾಗಿ ಕಾಣುತ್ತದೆ. ಏಕೆಂದರೆ ಅಮರೀಂದರ್ ಸಿಂಗ್ ಅವರು ತಮ್ಮನ್ನು ಅವಮಾನಿಸಲಾಗಿದೆ ಎಂದು ರಾಜೀನಾಮೆ ನೀಡಿದ ನಂತರ ಹೇಳಿದ್ದರು. ಅಲ್ಲದೆ ಅವರು "ರಾಜಕೀಯ ಭವಿಷ್ಯದ ಆಯ್ಕೆ ಯಾವಾಗಲೂ ಮುಕ್ತವಾಗಿರುತ್ತದೆ" ಎಂದಿದ್ದರು. ಈಗ ಆ ಆಯ್ಕೆಯನ್ನು ಬಳಸುತ್ತಾರೆ ಎನ್ನಲಾಗಿದೆ.

ಈ ಮಧ್ಯೆ ಅಮರೀಂದರ್ ಸಿಂರು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಊಹಾಪೋಹಗಳು ಹರಿದಾಡುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com