ಉಪ ಚುನಾವಣೆ: 3 ಲೋಕಸಭಾ ಕ್ಷೇತ್ರ, 30 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಮತದಾನ

3 ಲೋಕಸಭಾ ಕ್ಷೇತ್ರ, ಕರ್ನಾಟಕದ 2 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ 30 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಘೋಷಣೆ ಮಾಡಿದ್ದು, ಅಕ್ಟೋಬರ್ 30ರಂದು ಮತದಾನ ನಡೆಯಲಿದೆ ಎಂದು ತಿಳಿದುಬಂದಿದೆ.
ಚುನಾವಣಾ ಆಯೋಗ
ಚುನಾವಣಾ ಆಯೋಗ

ನವದೆಹಲಿ: 3 ಲೋಕಸಭಾ ಕ್ಷೇತ್ರ, ಕರ್ನಾಟಕದ 2 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ 30 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಘೋಷಣೆ ಮಾಡಿದ್ದು, ಅಕ್ಟೋಬರ್ 30ರಂದು ಮತದಾನ ನಡೆಯಲಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಂಗಳವಾರ ಚುನಾವಣಾ ಆಯೋಗ ಮಾಹಿತಿ ನೀಡಿದ್ದು,  ಅಕ್ಟೋಬರ್ 30ರಂದು ಮತದಾನ ನಡೆಯಲಿದೆ. ಅಂತೆಯೇ ನವೆಂಬರ್ 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದೆ.

ಕೋವಿಡ್ ಸಾಂಕ್ರಾಮಿಕ, ಪ್ರವಾಹ, ಸರಣಿ ಹಬ್ಬಗಳು, ಕೆಲವು ಪ್ರದೇಶಗಳಲ್ಲಿನ ಶೀತ ಪರಿಸ್ಥಿತಿಗಳು, ಸಂಬಂಧಿತ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಪ್ರತಿಕ್ರಿಯೆಗಳನ್ನು ಪರಿಶೀಲಿಸಿದ್ದು, ಎಲ್ಲಾ ಸಂಗತಿಗಳು ಮತ್ತು ಸನ್ನಿವೇಶಗಳನ್ನು ಪರಿಗಣಿಸಿ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಆಯೋಗ ಸ್ಪಷ್ಟನೆ ನೀಡಿದೆ. 

ಸಂಸತ್ತಿನಲ್ಲಿ ಖಾಲಿ ಇರುವ ಮೂರು ಸ್ಥಾನಗಳನ್ನು ಭರ್ತಿ ಮಾಡಲು ಉಪಚುನಾವಣೆ ನಡೆಸಲು ನಿರ್ಧರಿಸಲಾಗಿದ್ದು, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶ, ಕೇಂದ್ರಾಡಳಿತ ಕ್ಷೇತ್ರಗಳು ಮತ್ತು ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ 30 ಹುದ್ದೆಗಳು ಖಾಲಿ ಇವೆ ಎಂದು ಆಯೋಗ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಉಪಚುನಾವಣೆ ನಡೆಯಲಿರುವ 30 ವಿಧಾನಸಭಾ ಸ್ಥಾನಗಳು
ಅಸ್ಸಾಂನಲ್ಲಿ 5; ಪಶ್ಚಿಮ ಬಂಗಾಳದಲ್ಲಿ 4; ಮೇಘಾಲಯ, ಹಿಮಾಚಲ ಮತ್ತು ಮಧ್ಯಪ್ರದೇಶದಲ್ಲಿ ತಲಾ 3; ರಾಜಸ್ಥಾನ, ಕರ್ನಾಟಕ ಮತ್ತು ಬಿಹಾರದಲ್ಲಿ ತಲಾ 2 ಮತ್ತು ಆಂಧ್ರಪ್ರದೇಶ, ತೆಲಂಗಾಣ, ಮಿಜೋರಾಂ ನಾಗಾಲ್ಯಾಂಡ್, ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ತಲಾ 1 ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ ಎಂದು ಆಯೋಗ ಮಾಹಿತಿ ನೀಡಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com