ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,795 ಹೊಸ ಪ್ರಕರಣ, 179 ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18 ಸಾವಿರದ 795 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 179 ಮಂದಿ ಮೃತಪಟ್ಟಿದ್ದಾರೆ.
Published: 28th September 2021 10:32 AM | Last Updated: 28th September 2021 01:16 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18 ಸಾವಿರದ 795 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 179 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿಯ 36 ಲಕ್ಷದ 97 ಸಾವಿರದ 581ಕ್ಕೆ ತಲುಪಿದ್ದು, 4 ಲಕ್ಷದ 47 ಸಾವಿರದ 373 ಮಂದಿ ಇದುವರೆಗೆ ಸೋಂಕಿಗೆ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಸಕ್ರಿಯ ಸೋಂಕಿತ ಪ್ರಕರಣಗಳ ಸಂಖ್ಯೆ ದೇಶದಲ್ಲಿ 2ಲಕ್ಷದ 92 ಸಾವಿರದ 206ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 18 ಸಾವಿರದ 795ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,29,58,002ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 13,21,780 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದುವರೆಗೆ 56,57,30,031 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 87.07 ಕೋಟಿ ಲಸಿಕೆ ಡೋಸ್ ಗಳನ್ನು ನೀಡಲಾಗಿದೆ. ನಿನ್ನೆ ಒಂದೇ ದಿನ 1 ಕೋಟಿಗೂ ಅಧಿಕ ಲಸಿಕೆ ಡೋಸ್ ಗಳನ್ನು ವಿತರಿಸಲಾಗಿದೆ.
ಇದುವರೆಗೆ 84.70 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಲಾಗಿದೆ ಮತ್ತು 42.83 ಲಕ್ಷ ಡೋಸ್‌ಗಳು (42,83,200) ನೀಡಿಕೆ ಹಂತದಲ್ಲಿದೆ. 4.75 ಕೋಟಿಗೂ ಹೆಚ್ಚು ಬಾಕಿ ಮತ್ತು ಬಳಕೆಯಾಗದ ಲಸಿಕೆ ಪ್ರಮಾಣಗಳು ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಕೇಂದ್ರ ಸರ್ಕಾರ ಅಂಕಿಅಂಶ ತಿಳಿಸಿದೆ.