ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು: 86 ಕೋಟಿಗೂ ಅಧಿಕ ಡೋಸ್ ನೀಡಿಕೆ

ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಮತ್ತೊಂದು ಮೈಲಿಗಲ್ಲನ್ನು ದಾಟಿದೆ, ಇದುವರೆಗೆ ಒಟ್ಟು 86 ಕೋಟಿಗಿಂತಲೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಇದು ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮತ್ತೊಂದು ಸಾಧನೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಮುಂಬೈಯಲ್ಲಿ ಆರೋಗ್ಯ ಸೇವೆ ಕಾರ್ಯಕರ್ತೆಯರಿಗೆ ಲಸಿಕೆ ನೀಡಿಕೆ
ಮುಂಬೈಯಲ್ಲಿ ಆರೋಗ್ಯ ಸೇವೆ ಕಾರ್ಯಕರ್ತೆಯರಿಗೆ ಲಸಿಕೆ ನೀಡಿಕೆ

ನವದೆಹಲಿ: ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಮತ್ತೊಂದು ಮೈಲಿಗಲ್ಲನ್ನು ದಾಟಿದೆ, ಇದುವರೆಗೆ ಒಟ್ಟು 86 ಕೋಟಿಗಿಂತಲೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಇದು ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮತ್ತೊಂದು ಸಾಧನೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕಳೆದ 24 ಗಂಟೆಗಳಲ್ಲಿ 38 ಲಕ್ಷ 18 ಸಾವಿರಕ್ಕೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.

ದೇಶಕ್ಕೆ ಅಭಿನಂದನೆಗಳು, ಒಂದೇ ದಿನ 1 ಕೋಟಿ ಕೋವಿಡ್-19 ಲಸಿಕೆ ಡೋಸ್ ಗಳನ್ನು ನೀಡಿದ್ದೇವೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಕೋವಿಡ್ ಲಸಿಕೆ ವಿತರಣೆಯಲ್ಲಿ ಭಾರತ ಮಹತ್ವದ ಮೈಲಿಗಲ್ಲನ್ನು 5ನೇ ಬಾರಿ ಸಾಧಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.

ನಿನ್ನೆ ಮೊದಲ ಬಾರಿಗೆ ದೇಶದಲ್ಲಿ ಕೋವಿಡ್-19 ಲಸಿಕೆ ಅಭಿಯಾನ ಆರಂಭವಾದ ನಂತರ 1 ಕೋಟಿ ದಾಟಿದೆ. ಈ ವರ್ಷ ಜನವರಿ 16ರಂದು ದೇಶಾದ್ಯಂತ ಕೋವಿಡ್-19 ಲಸಿಕೆ ಅಭಿಯಾನ ಆರಂಭವಾಗಿದ್ದು ಆರೋಗ್ಯ ವಲಯ ಕಾರ್ಯಕರ್ತರಿಗೆ ಮೊದಲ ಬಾರಿ ಲಸಿಕೆ ನೀಡಲಾಯಿತು. 

ಮುಂಚೂಣಿ ವಲಯದಲ್ಲಿ ಕೆಲಸ ಮಾಡುವ ಕಾರ್ಯಕರ್ತರಿಗೆ ಫೆಬ್ರವರಿ 2ರಂದು ಆರಂಭವಾಗಿತ್ತು.ಮುಂದಿನ ಹಂತದ ಕೋವಿಡ್-19 ಲಸಿಕೆ ಅಭಿಯಾನ ಮಾರ್ಚ್ 1ರಂದು ಆರಂಭವಾಗಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಹಾಗೂ ನಂತರ ಏಪ್ರಿಲ್ 1ರಿಂದ ಹಂತಹಂತವಾಗಿ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನೀಡಲಾಯಿತು.

ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆಲ್ಲರಿಗೂ ಕೋವಿಡ್-19 ಲಸಿಕೆ ನೀಡಲು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿತು. ದೇಶದಲ್ಲಿ ೧೮ ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಕೇಂದ್ರ ಸರ್ಕಾರದಿಂದ ಉಚಿತ ಕೋವಿಡ್-೧೯ ಲಸಿಕೆ ನೀಡುವ ಅಭಿಯಾನ ಮುಂದುವರಿಯುತ್ತಿದ್ದು, ಎಲ್ಲ ಅರ್ಹರು ಲಸಿಕೆ ಹಾಕಿಸಿಕೊಳ್ಳಬೇಕೆಂದು ಹಾಗೂ ಇತರರು ಲಸಿಕೆ ಪಡೆಯಲು ನೆರವಾಗಬೇಕೆಂದು ಸರ್ಕಾರ ಮನವಿ ಮಾಡುತ್ತಿದೆ.

ಬಂಧಿತರು: ಪ್ರೀತಂ ಶೆಟ್ಟಿ, ಭಜರಂಗದಳ ಜಿಲ್ಲಾ ಮುಖಂಡ ಅರ್ಶಿತ್, ಭಜರಂಗದಳ ಸುರತ್ಕಲ್ ಮುಖಂಡ ಶ್ರೀನಿವಾಸ್, ರಾಕೇಶ್ ಮತ್ತು ಅಭಿಷೇಕ್ ಅವರನ್ನು ಬಂಧಿಸಿ ಸೆಕ್ಷನ್ 341, 323 ಅಡಿಯಲ್ಲಿ ಕೇಸು ದಾಖಲಿಸಲಾಗಿದೆ ಕಾರಿನಲ್ಲಿ ಇಬ್ಬರು ಕ್ರಿಶ್ಚಿಯನ್ ಹುಡುಗರು, ಒಬ್ಬ ಮುಸ್ಲಿಂ ಹುಡುಗ ಮತ್ತು ಮೂವರು ಮುಸ್ಲಿಂ ಹುಡುಗಿಯರು ಇದ್ದರು ಎಂದು ಮಂಗಳೂರಿನ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದೇ ರೀತಿಯ ಘಟನೆ ಕಳೆದ ಸೆಪ್ಟೆಂಬರ್ 17 ರಂದು ನಡೆದಿದ್ದು, ಇಬ್ಬರು ಯುವಕರು ತಮ್ಮ ಮಹಿಳಾ ಸಹೋದ್ಯೋಗಿಯನ್ನು ಅನ್ಯ ಧರ್ಮದ ಯುವಕ ಬೈಕ್ ನಲ್ಲಿ ಕರೆದುಕೊಂಡು ಹೋಗಿ ಬಿಟ್ಟದ್ದಕ್ಕಾಗಿ ತಡೆದು ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರಿನ ಹೊಸೂರು ರಸ್ತೆಯ ಡೈರಿ ಸರ್ಕಲ್ ಬಳಿ ಯುವತಿಯನ್ನು ಬೈಕ್ ನಲ್ಲಿ ತಂದು ಬಿಟ್ಟ ಯುವಕನ ಮೇಲೆ ಹಲ್ಲೆ ನಡೆದಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com