ಅಪೌಷ್ಟಿಕತೆ ನಿವಾರಣೆಗೆ 35 ಬೆಳೆ ತಳಿಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಹವಾಮಾನ ಬದಲಾವಣೆ ಮತ್ತು ಅಪೌಷ್ಟಿಕತೆಯ ಅವಳಿ ಸವಾಲುಗಳನ್ನು ಎದುರಿಸಲು ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್) ಅಭಿವೃದ್ಧಿಪಡಿಸಿದ ವಿಶೇಷ ಗುಣಲಕ್ಷಣಗಳನ್ನು ಹೊಂದಿದ 35 ಬೆಳೆ ತಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬಿಡುಗಡೆ ಮಾಡಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 35 ಹೊಸ ವಿಧದ ಬೀಜಗಳನ್ನು ದೇಶಕ್ಕೆ ಅರ್ಪಿಸಿದ್ದು, ಈ ಬೀಜಗಳು ರೂಪಾಂತರಗೊಳ್ಳುವ ಹವಾಮಾನ ಬದಲಾವಣೆಗೆ ನಿರೋಧಕವಾಗಿರುತ್ತವೆ ಮತ್ತು ಹೆಚ್ಚಿನ ಪೌಷ್ಟಿಕಾಂಶ ಮೌಲ್ಯವನ್ನು ಹೊಂದಿವೆ ಎಂದು ಹೇಳಿದ್ದಾರೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಬಯೋಟಿಕ್ ಸ್ಟ್ರೆಸ್ ಮ್ಯಾನೇಜ್‌ಮೆಂಟ್ ರಾಯ್‌ಪುರದ ಹೊಸದಾಗಿ ನಿರ್ಮಿಸಲಾದ ಕ್ಯಾಂಪಸ್ ಅನ್ನು ಮಂಗಳವಾರ ರಾಷ್ಟ್ರಕ್ಕೆ ಅರ್ಪಿಸಿ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

"ಬದಲಾಗುತ್ತಿರುವ ಹವಾಮಾನದಲ್ಲಿ ನಮ್ಮ ಗಮನವು ಹೊಸ ಪರಿಸ್ಥಿತಿಗಳಿಗೆ ಹೊಂದಿಕೊಂಡಂತೆ ಹೆಚ್ಚು ಪೌಷ್ಟಿಕಾಂಶಯುಕ್ತ ಬೀಜಗಳ ಮೇಲಿದೆ” ಎಂದು ಹೇಳಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ ಸರ್ಕಾರದ ರೈತ ಸ್ನೇಹಿ ಉಪಕ್ರಮಗಳನ್ನು ಉಲ್ಲೇಖಿಸಿದ ಪ್ರಧಾನಿ, ರೋಗಗಳಿಂದ ಬೆಳೆಗಳನ್ನು ರಕ್ಷಿಸಲು ಮತ್ತು ಹೆಚ್ಚಿನ ಇಳುವರಿ ಪಡೆಯಲು ರೈತರಿಗೆ ಹೊಸ ತಳಿಯ ಬೀಜಗಳನ್ನು ನೀಡಲಾಗಿದೆ ಎಂದಿದ್ದಾರೆ.

"ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸುವುದರ ಜೊತೆಗೆ, ಖರೀದಿ ಪ್ರಕ್ರಿಯೆಯನ್ನು ಸುಧಾರಿಸಲಾಗಿದೆ ಇದರಿಂದ ಹೆಚ್ಚು ಹೆಚ್ಚು ರೈತರು ಲಾಭ ಪಡೆಯಬಹುದು. ರಬಿ ಋತುವಿನಲ್ಲಿ 430 ಲಕ್ಷಕ್ಕೂ ಹೆಚ್ಚು ಮೆಟ್ರಿಕ್ ಟನ್‌ಗಳಷ್ಟು ಗೋಧಿಯನ್ನು ಖರೀದಿಸಲಾಗಿದೆ ಮತ್ತು ರೈತರಿಗೆ 85 ಸಾವಿರ ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಾವತಿಸಲಾಗಿದೆ.

ಸಾಂಕ್ರಾಮಿಕ ಸಮಯದಲ್ಲಿ ಗೋಧಿ ಖರೀದಿ ಕೇಂದ್ರಗಳನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ "ಎಂದು ತಿಳಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಎಂಎಸ್‌ಪಿಯು ಗ್ಯಾರಂಟಿ ನೀಡುವ ಕಾನೂನು ರೈತ ಗುಂಪುಗಳನ್ನು ಕೆರಳಿಸುವ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ.

ರೈತರನ್ನು ಬೆಳೆ ಆಧಾರಿತ ಆದಾಯ ವ್ಯವಸ್ಥೆಯಿಂದ ಹೊರತೆಗೆಯಲು ಮತ್ತು ಮೌಲ್ಯವರ್ಧನೆ ಮತ್ತು ಇತರ ಕೃಷಿ ಆಯ್ಕೆಗಳಿಗೆ ಪ್ರೋತ್ಸಾಹಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕೊರೋನಾ ಸಾಂಕ್ರಾಮಿಕದ ಮಧ್ಯೆ ಕಳೆದ ವರ್ಷ ವಿವಿಧ ರಾಜ್ಯಗಳಲ್ಲಿ ನಡೆದ ಬೃಹತ್ ಮಿಡತೆ ದಾಳಿಯನ್ನು ನೆನಪಿಸಿಕೊಂಡಿದ್ದು "ಭಾರತವು ಈ ದಾಳಿಯನ್ನು ಸಾಕಷ್ಟು ಪ್ರಯತ್ನಗಳನ್ನು ಮಾಡುವ ಮೂಲಕ ನಿಭಾಯಿಸಿದ್ದು, ರೈತರು ಹೆಚ್ಚಿನ ಹಾನಿ ಅನುಭವಿಸದಂತೆ ಮಾಡಲಾಯಿತು" ಎಂದಿದ್ದಾರೆ.

ಇದೇ ವೇಳೆ ರಾಗಿ ಮತ್ತು ಇತರ ರೀತಿಯ ಧಾನ್ಯಗಳ ಕೃಷಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದ್ದಲ್ಲದೆ, ಮುಂಬರುವ ವರ್ಷವನ್ನು 'ರಾಗಿ ವರ್ಷ' ಎಂದು ಘೋಷಿಸುವ ಮೂಲಕ ವಿಶ್ವಸಂಸ್ಥೆ ಒದಗಿಸಿದ ಅವಕಾಶಗಳನ್ನು ಬಳಸಲು ಜನರು ಸಿದ್ಧರಾಗುವಂತೆ ಮನವಿ ಮಾಡಿದ್ದಾರೆ.

ಏತನ್ಮಧ್ಯೆ, ಪ್ರಧಾನಮಂತ್ರಿ ಅವರು ಕೃಷಿ ವಿಶ್ವವಿದ್ಯಾಲಯಗಳಿಗೆ ಹಸಿರು ಕ್ಯಾಂಪಸ್ ಪ್ರಶಸ್ತಿಯನ್ನು ವಿತರಿಸಿದರಲ್ಲದೆ, ನವೀನ ವಿಧಾನಗಳನ್ನು ಬಳಸುವ ರೈತರೊಂದಿಗೆ ಸಂವಾದ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com