ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2021: 3261 ಹುದ್ದೆಗಳು ಖಾಲಿ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ಸ್ಟಾಫ್ ಸೆಲೆಕ್ಷನ್ ಕಮಿಷನ್ ವತಿಯಿಂದ ಒಟ್ಟು 3261 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2021
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2021

ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ ವತಿಯಿಂದ ಒಟ್ಟು 3261 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳು: 3261

ಹುದ್ದೆಗಳ ಹೆಸರು: 
ಜೂನಿಯರ್ ಸೀಡ್ ಅನಾಲಿಸ್ಟ್, ಸೈಂಟಿಫಿಕ್ ಅಸಿಸ್ಟಂಟ್, ಅಕೌಂಟಂಟ್, ಹೆಡ್ ಕ್ಲರ್ಕ್, ಸ್ಟಾಫ್ ಕಾರ್ ಡ್ರೈವರ್, ಟೆಕ್ನಿಕಲ್ ಸೂಪರಿಂಟೆಂಡಂಟ್, ಟೆಕ್ನಿಕಲ್ ಅಸಿಸ್ಟಂಟ್, ಜೂನಿಯರ್ ಕಂಪ್ಯೂಟರ್ ಆಪರೇಟರ್, ಮಲ್ಟಿಟಾಸ್ಕಿಂಗ್ ಸ್ಟಾಫ್, ಸೀನಿಯರ್ ಸೈಂಟಿಫಿಕ್ ಅಸಿಸ್ಟಂಟ್, ಲ್ಯಾಬೋರೇಟರಿ ಅಸಿಸ್ಟೆಂಟ್, ಆಫೀಸ್ ಅಟೆಂಡೆಂಟ್ ಹಾಗೂ ವಿವಿಧ ಹುದ್ದೆಗಳು.

ವಿದ್ಯಾರ್ಹತೆ:
ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ವಯೋಮಿತಿ
ಕನಿಷ್ಠ 18 ವರ್ಷ, ಗರಿಷ್ಠ 30 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ
ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಕ್ಕೆ 5 ವರ್ಷ ಸಡಿಲಿಕೆ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ

ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಕೃತ ವೆಬ್ ವಿಳಾಸ https://ssc.nic.in/ ಗೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/10/2021

ಆಯ್ಕೆ ವಿಧಾನ
ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ
ಮಹಿಳಾ/ಎಸ್ ಸಿ/ಎಸ್ ಟಿ/ ಪಿಡಬ್ಲ್ಯೂಡಿ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಉಳಿದ ಅಭ್ಯರ್ಥಿಗಳು ಅರ್ಜಿ 100 ರೂ ಶುಲ್ಕ ಪಾವತಿಸಬೇಕು

ಅರ್ಜಿ ಶುಲ್ಕ ಪಾವತಿ ವಿಧಾನ
ಶುಲ್ಕವನ್ನು ಆನ್ ಲೈನ್ ಮೂಲಕ ಮತ್ತು ಆಫ್ ಲೈನ್ ನಲ್ಲಿ ಅಂದರೆ ಬ್ಯಾಂಕ್ ನಲ್ಲಿ ಹಣ ಕಟ್ಟಿ ಚಲನ್ ಮೂಲಕ ಪಾವತಿಸಬಹುದು.

ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ: 28/10/2021

ವೆಬ್ ಸೈಟ್ ವಿಳಾಸ
https://ssc.nic.in/

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com